ಉಳ್ಳಾಲ, ಜೂ.13 : ಇಲ್ಲಿನ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಸಂಭವಿಸಿದೆ.
ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹಮ್ಮದ್ ಮತ್ತು ಖಮರ್ಜಹಾ ಬಾನು ಇವರ ಹಿರಿಯ ಪುತ್ರಿ ಹಿಬಾ ಐಮನ್ (15) ಮೃತಪಟ್ಟ ಬಾಲಕಿ. 18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು.
ನಿನ್ನೆ ರಾತ್ರಿ ದಂಪತಿ ಇಬ್ಬರೂ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು. ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರೆನ್ನಲಾಗಿದೆ. ಈ ವೇಳೆ ಹಿಬಾ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕಲೆಂದು ಕುರ್ಚಿಯಲ್ಲಿ ನಿಂತಿದ್ದ ವೇಳೆ ಆಯತಪ್ಪಿ ವಸತಿ ಸಂಕೀರ್ಣದಿಂದ ಕೆಳಗಡೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹಿಬಾ ಮಂಗಳೂರಿನ ಯೆನೆಪೊಯ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದರು, ಈ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ