ನವದೆಹಲಿ: ಜುಲೈ 9ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ ನಡೆಯುವ ಭಾರತ್ ಬಂದ್‌ನಲ್ಲಿ ಸುಮಾರು 25 ಕೋಟಿಗೂ ಅಧಿಕ ಕಾರ್ಮಿಕರು ಭಾಗವಹಿಸುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಮತ್ತು ಕಾರ್ಪೋರೇಟ್ ಪರವಾದ ನೀತಿಯನ್ನು ಖಂಡಿಸಿ ಒಟ್ಟು 10 ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್ ಬಂದ್‌ಗೆ ಕರೆ ನೀಡಿವೆ.
ನಾಳೆ ಬ್ಯಾಂಕಿಂಗ್, ವಿಮೆ, ಅಂಚೆ ಕಚೇರಿ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಹಿಂದ್ ಮಜ್ದೂರ್ ಸಭಾದ ನಾಯಕ ಹರ್ಭಜನ್ ಸಿಂಗ್, ಬ್ಯಾಂಕ್, ಅಂಚೆ, ಗಣಿಗಾರಿಕೆ, ಸಾರ್ವಜನಿಕ ವಲಯದ ಕಾರ್ಖಾನೆ ಮತ್ತು ರಾಜ್ಯ ಸಾರಿಗೆ ಸ್ತಬ್ಧವಾಗಲಿದೆ ಎಂದು ಹೇಳಿದ್ದಾರೆ.
ಕಳೆದ 10 ವರ್ಷಗಳಿಂದ ವಾರ್ಷಿಕ ಕಾರ್ಮಿಕ ಸಮ್ಮೇಳನವನ್ನು ಆಯೋಜಿಸುತ್ತಿಲ್ಲ. ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ ಹೆಚ್ಚುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿವೆ, ವೇತನ ಕುಸಿಯುತ್ತಿದೆ ಮತ್ತು ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ನಾಗರಿಕ ಸೌಲಭ್ಯಗಳ ಮೇಲಿನ ಸಾಮಾಜಿಕ ವಲಯದ ವೆಚ್ಚವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆಗಳ ವೇದಿಕೆ ಆರೋಪಿಸಿದೆ.
ಶಾಲಾ-ಕಾಲೇಜು ಬಂದ್ ಆಗುತ್ತಾ?
ಭಾರತ್ ಬಂದ್‌ನಿಂದಾಗಿ ಸಾರಿಗೆ ಸೇವೆಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಇದರಿಂದಾಗಿ ಶಾಲೆಗಳು ಮತ್ತು ಕಾಲೇಜುಗಳು ಸಹ ಪರಿಣಾಮ ಬೀರಬಹುದು. ಆದರೆ ಈವರೆಗೆ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವ ಕುರಿತು ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಪ್ರಮುಖ ಬೇಡಿಕೆಗಳು ಈ ಕೆಳಗಿನಂತಿವೆ:
▪️ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ: ಈ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಒಕ್ಕೂಟಗಳು ಆರೋಪಿಸಿವೆ.
▪️ಕೆಲಸದ ಸಮಯ ಹೆಚ್ಚಳ: ಕಾರ್ಮಿಕರ ಕೆಲಸದ ಸಮಯವನ್ನು ಹೆಚ್ಚಿಸುವ ನೀತಿಗಳನ್ನು ವಿರೋಧಿಸಲಾಗುತ್ತಿದೆ.
▪️ಗುತ್ತಿಗೆ ಮತ್ತು ಹೊರಗುತ್ತಿಗೆ: ಸಾರ್ವಜನಿಕ ವಲಯದಲ್ಲಿ ಗುತ್ತಿಗೆ ಆಧಾರಿತ ನೇಮಕಾತಿಗಳು ಕಾರ್ಮಿಕರ ಭದ್ರತೆಗೆ ಧಕ್ಕೆ ತರುತ್ತಿವೆ.
▪️ಹೊಸ ನೇಮಕಾತಿಗಳ ಕೊರತೆ: ಸರ್ಕಾರಿ ಮತ್ತು ಸಾರ್ವಜನಿಕ ವಲಯದಲ್ಲಿ ಶಾಶ್ವತ ಉದ್ಯೋಗ ಸೃಷ್ಟಿಯ ಕೊರತೆ.
▪️ಕಾರ್ಪೊರೇಟ್ ಪರ ನೀತಿಗಳು: ಸರ್ಕಾರವು ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿದೆ ಎಂಬ ಆರೋಪ
ಬಂದ್‌ಗೆ ಕರೆ ನೀಡಿದ ಸಂಘಟನೆಗಳು
ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ),
ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್ಟಿಯುಸಿ)
ಎಚ್ಎಂಎಸ್, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)
ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ),
ಟ್ರೇಡ್ ಯೂನಿಯನ್ ಕೋಆರ್ಡಿನೇಷನ್ ಸೆಂಟರ್ (ಟಿಯುಸಿಸಿ)
ಸ್ವಯಂ ಉದ್ಯೋಗಿ ಮಹಿಳಾ ಸಂಘ (ಎಸ್ಇವಿಎ)
ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)
ಲೇಬರ್ ಪ್ರೊಗ್ರೆಸ್ಸಿವ್ ಫೆಡರೇಶನ್ (ಎಲ್ಪಿಎಫ್)
ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಯುಟಿಯುಸಿ)
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ