ಪುತ್ತೂರು : ಕರಾವಳಿ ಕರ್ನಾಟಕದಲ್ಲಿ ಕೋಮು ವೈಷಮ್ಯವು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೌಹಾರ್ದ ಸಂದೇಶಗಳನ್ನು ಹರಡುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಕರಾವಳಿಯ ನೆಲದಲ್ಲಿ ‘ಸೌಹಾರ್ದ ಸಂಚಾರ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇದೇ ಬರುವ 2025 ಜುಲೈ 14, 15, 16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ಸರ್ವ ಮತೀಯರೂ ಜೊತೆಗೂಡಿ ಸಾಗುವ ಈ ಸಂಚಾರವು ಇಸ್ಲಾಮಿನ ಸೌಹಾರ್ದ ಸಂದೇಶವನ್ನು ಸಮಾಜದ ಮುಂದೆ ತೆರೆದಿಡಲಿದೆ. ಕುಂದಾಪುರ, ಉಡುಪಿ, ಕಾರ್ಕಳ, ಕಾಪು, ಪಡುಬಿದ್ರಿ, ಮುಲ್ಕಿ, ಸುರತ್ಕಲ್, ಮಂಗಳೂರು, ಫರಂಗಿಪೇಟೆ, ಬಿ.ಸಿ.ರೋಡು, ಕಲ್ಲಡ್ಕ ಕೇಂದ್ರವಾಗಿ ಹಾದು ಜುಲೈ 16 ರಂದು ಬೆಳಿಗ್ಗೆ 9 ಕ್ಕೆ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಪುತ್ತೂರು ಕೇಂದ್ರಕ್ಕೆ ಆಗಮಿಸಿ ಉಪ್ಪಿನಂಗಡಿ, ಕಡಬ ಮಾರ್ಗವಾಗಿ ಸುಳ್ಯ ಕೇಂದ್ರದಲ್ಲಿ ಸಮಾರೋಪಗೊಳ್ಳಲಿದೆ. ಪ್ರತೀ ಕೇಂದ್ರಗಳಲ್ಲೂ ಕಾಲ್ನಡಿಗೆ ಜಾಥಾ ಮತ್ತು ಸಭಾ ಕಾರ್ಯಕ್ರಮಗಳು ನಡೆಯಲಿವೆ.
ಆದುದರಿಂದ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘಟನೆಯ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ತಮಗೆ ಸಾಧ್ಯವಾಗುವ ಕೇಂದ್ರಗಳಿಗೆ ಆಗಮಿಸಿ ಸೌಹಾರ್ದ ಸಂಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ವರದಿ : ಅಬೂಸೈಹಾನ್ ಪುತ್ತೂರು
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ