ಅಬುಧಾಬಿ: ಭಾರತೀಯರಿಗೆ ಜೀವಮಾನದ ಗೋಲ್ಡನ್ ವೀಸಾ ನೀಡುವುದಾಗಿ ಪ್ರಚಾರಗೊಂಡ ವರದಿಗಳನ್ನು ಯುಎಇ ನಿರಾಕರಿಸಿದೆ. ಕನ್ನಡ ಸೇರಿದಂತೆ ಭಾರತದ ಪ್ರಮುಖ ಮಾಧ್ಯಮಗಳಲ್ಲಿ ಭಾರತೀಯರು 23 ಲಕ್ಷ ರೂ. ಪಾವತಿಸಿದರೆ ಯುಎಇಯಲ್ಲಿ ಜೀವಮಾನದ ಗೋಲ್ಡನ್ ವೀಸಾ ಪಡೆಯಬಹುದು ಎಂಬ ಸುದ್ದಿಯನ್ನು ಎರಡು ದಿನಗಳ ಹಿಂದೆ ಪ್ರಕಟಿಸಿದ್ದವು. ಕೆಲವು ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿಯವರ ಚಿತ್ರದೊಂದಿಗೆ ಈ ಸುದ್ದಿಯನ್ನು ಪ್ರಸಾರ ಮಾಡಿದ್ದವು.
ಅಂತರರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ವ್ಯಾಪಕವಾಗಿ ಕಾಣಿಸಿಕೊಂಡಿರುವ ಈ ಸುದ್ದಿ ಆಧಾರರಹಿತವಾಗಿದೆ ಎಂದು ಯುಎಇ ಫೆಡರಲ್ ಅಥಾರಿಟಿ ಫಾರ್ ಐಡೆಂಟಿಟಿ ಅಂಡ್ ಸಿಟಿಜನ್‌ಶಿಪ್ ಹೇಳಿದೆ.
ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಲಹಾ ಕಚೇರಿಯಿಂದ ಬಿಡುಗಡೆಯಾದ ಪತ್ರಿಕಾ ಪ್ರಕಟಣೆಯ ಆಧಾರದಲ್ಲಿ ಈ ಸುದ್ದಿ ಪಾರಚಾಗೊಂಡಿದೆ. ಅದರಲ್ಲಿ ನೀಡಲಾದ ಮಾಹಿತಿಯು ವಾಸ್ತವಕ್ಕೆ ವಿರುದ್ಧವಾಗಿದೆ. ಯುಎಇ ಗೋಲ್ಡನ್ ವೀಸಾ ಎಲ್ಲರಿಗೂ ಸುಲಭವಾಗಿ ಲಭಿಸುವಂತಿಲ್ಲ. ಇದಕ್ಕಾಗಿ ಅರ್ಜಿಗಳನ್ನು ಯುಎಇಯೊಳಗಿನ ಅಧಿಕೃತ ವ್ಯವಸ್ಥೆಗಳ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ ಎಂದು ಯುಎಇ ಫೆಡರಲ್ ಅಥಾರಿಟಿ ಫಾರ್ ಐಡೆಂಟಿಟಿ ಅಂಡ್ ಸಿಟಿಜನ್‌ಶಿಪ್ ಹೇಳಿದೆ.
ಸಾಮಾನ್ಯವಾಗಿ ಕನ್ನಡ ಮಾಧ್ಯಮಗಳು ಗಲ್ಫ್ ಸುದ್ದಿಗಳನ್ನು ಪ್ರಕಟಿಸುವುದು ವಿರಳವಾಗಿದೆ. ಆದರೆ, ಇದು ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಹಲವು ಮಾಧ್ಯಮಗಳು ಈ ಸುಳ್ಳು ಸುದ್ದಿಯನ್ನು ಬಹಳ ಆವೇಶದಿಂದ ಪ್ರಕಟಿಸಿದೆ. ಅನಿವಾಸಿ ಮಿತ್ರರು, ಯುಎಇ ಪ್ರಯಾಣ ಬಯಸುವವರು ಇಂತಹಾ ಯಾವುದೇ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು