ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲ ಜಾತಿ ಮತಗಳ ಜನರನ್ನು ಸೇರಿಸಿ ನಡೆಸುವ ‘ಸೌಹಾರ್ದ ಸಂಚಾರ’ಕ್ಕೆ ಜುಲೈ 14 ಸೋಮವಾರದಂದು ಬೆಳಗ್ಗೆ 9ಗಂಟೆಗೆ ಕುಂದಾಪುರದಲ್ಲಿ ಚಾಲನೆ ನೀಡಲಾಗುವುದು
ಸಯ್ಯಿದ್ ಕೋಟೇಶ್ವರ ತಂಙಳ್ ಝಿಯಾರತ್ ಮೂಲಕ ಚಾಲನೆ ನೀಡಲಿದ್ದು, ಧರ್ಮಗುರು
ರೆ.ಫಾ. ನೋವೆಲ್ ಬ್ರಹ್ಮಾವರ್, ಪತ್ರಕರ್ತ ಶಶಿಧರ ಹೆಮ್ಮಾಡಿ ಭಾಗವಹಿಸುವರು. ಶಾಸ್ತ್ರೀ ಪಾರ್ಕ್‌ನಲ್ಲಿ ನಡೆಯುವ ಸಾರ್ವಜನಿಕ ಸಭೆಯನ್ನು ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ಉದ್ಘಾಟಿಸುವರು. ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 12 ಗಂಟೆಗೆ ಉಡುಪಿ ನಗರದಲ್ಲಿ ನಡೆಯುವ ಜಾಥಾ ಮತ್ತು ಸಾರ್ವಜನಿಕ ಸಭೆಯಲ್ಲಿ ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್, ಬೈಂದೂರು ಹಲಗೇರಿ ಜೋಗಿ ಮನೆಯ ಶ್ರೀ ವಸಂತನಾಥ ಗುರೂಜಿ, ನ್ಯಾಯವಾದಿ ಹಂಝತ್ ಹೆಜಮಾಡಿ ಮಾತನಾಡುವರು.
ಅಪರಾಹ್ನ 3.30ಕ್ಕೆ ಕಾರ್ಕಳ ತಲುಪಲಿರುವ ಸೌಹಾರ್ದ ಸಂಚಾರದಲ್ಲಿ ಧರ್ಮಗುರುಗಳಾದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಚಾರ್ಯ ಮಹಾಸ್ವಾಮಿ, ಡಾ ಝೈನಿ ಕಾಮಿಲ್, ರೆ. ಫಾ. ಅಲ್ಬಾನ್ ಡಿ’ಸೋಜಾ ಅತ್ತೂರು ಚರ್ಚ್, ಎಸ್ ವೈ ಎಸ್ ರಾಜ್ಯ ಕೋಶಾಧಿಕಾರಿ ಮನ್ಸೂರ್ ಕೋಟೆಗದ್ದೆ ಸೌಹಾರ್ದ ಸಂದೇಶ ನೀಡುವರು.
ಸಂಜೆ 5.30ಕ್ಕೆ ಕಾಪುವಿನಲ್ಲಿ ಶ್ರೀ ಶ್ರೀ ಗುರೂಜಿ ಶಂಕರಪುರ ಮಠ, ರೆ.ಫಾ. ಸುಧೀರ್ ಪ್ರಕಾಶ್, ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ರಝ್ವಿ, ಜಿಲ್ಲಾ ಉಪಾಧ್ಯಕ್ಷ ಯಾಕೂಬ್ ಸಅದಿ ನಾವೂರು ಮಾತನಾಡುವರು.
ರಾತ್ರಿ 8ಕ್ಕೆ ಪಡುಬಿದ್ರೆಯಲ್ಲಿ ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ, ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ರಖೀಬ್ ಕನ್ನಂಗಾರ್ ಸೌಹಾರ್ದ ಸಂದೇಶ ನೀಡಲಿದ್ದಾರೆ ಎಂದು ಸಂಚಾರ ಸಮಿತಿ ಕಾರ್ಯದರ್ಶಿ ಹಸೈನಾರ್ ಆನೆಮಹಲ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ