ಹೊಸದಿಲ್ಲಿ :ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟು ಯೆಮೆನ್ ಜೈಲಿನಲ್ಲಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಗಲ್ಲುಶಿಕ್ಷೆ ತಡೆಯಲು ಭಾರತ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ, ಈ ವಿಷಯದಲ್ಲಿ ಭಾರತಕ್ಕೆ ತಲುಪಲು ಸಾಧ್ಯವಿರುವ ಮಿತಿಯನ್ನು ಸರಕಾರ ಈಗಾಗಲೇ ತಲುಪಿದೆ ಎಂದು ಸರಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಯೆಮೆನ್ ರಾಜತಾಂತ್ರಿಕವಾಗಿ ಗುರುತಿಸಲ್ಪಟ್ಟಿಲ್ಲ ಆದ್ದರಿಂದ ಸರಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ.ಬ್ಲಡ್ ಮನಿ (Blood money) ವಿಚಾರ ಖಾಸಗಿ ಮಾತುಕತೆಯಾಗಿದೆ. ಸರಕಾರ ಖಾಸಗಿ ಮಾರ್ಗಗಳ ಮೂಲಕ ನಿಮಿಷಾ ಅವರನ್ನು ರಕ್ಷಿಸಲು ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ ಎಂದು ಸರಕಾರಿ ವಕೀಲ ಎಜಿ ವೆಂಕಟರಮಣಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಭಾರತ ಸರಕಾರ ಯಾವ ಹಂತಕ್ಕೆ ಹೋಗಬಹುದು ಎಂಬುದಕ್ಕೆ ಒಂದು ಮಿತಿಯಿದೆ. ನಾವು ಅದನ್ನು ತಲುಪಿದ್ದೇವೆ. ಯೆಮೆನ್ ಇತರ ದೇಶಗಳಂತೆ ಅಲ್ಲ. ನಾವು ಸಾರ್ವಜನಿಕವಾಗಿ ಮಾತನಾಡುವ ಮೂಲಕ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಲು ಬಯಸಲಿಲ್ಲ. ನಾವು ಖಾಸಗಿ ಮಟ್ಟದಲ್ಲಿ ಪ್ರಯತ್ನಿಸುತ್ತಿದ್ದೇವೆ’ ಎಂದು ಸರಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ತಿಳಿಸಿದರು.
ಗಲ್ಲುಶಿಕ್ಷೆಯ ದಿನಾಂಕವನ್ನು ಈಗಾಗಲೇ ಯೆಮೆನ್ ನ್ಯಾಯಾಲಯ ಪ್ರಕಟಿಸಿದ್ದು, ಆ ಪ್ರಕಾರ ಇದೇ ತಿಂಗಳ 16 ನೇ ತಾರೀಖಿನಂದು ಗಲ್ಲುಶಿಕ್ಷೆ ಜಾರಿಯಾಗಲಿದೆ. ಏತನ್ಮಧ್ಯೆ ನಿಮಿಷಪ್ರಿಯಾ ಅವರ ಬಿಡುಗಡೆಗಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಮಧ್ಯಪ್ರವೇಶಿಸಿದ್ದಾರೆಂದು ಮಲಯಾಳಂ ಪತ್ರಿಕೆಗಳು ವರದಿ ಮಾಡಿದೆ.
ಅವರು, ಯೆಮೆನ್‌ನ ಪ್ರಮುಖ ಸೂಫಿ ವಿದ್ವಾಂಸರ ಮೂಲಕ ಯೆಮೆನ್ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ಹತ್ಯೆಗೊಳಗಾದ ಯೆಮೆನ್ ಪ್ರಜೆ ತಲಾಲ್ ಸಹೋದರನೊಂದಿಗೂ ಸಂವಹನ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆಶಾದಾಯಕ ಪ್ರತಿಕ್ರಿಯೆ ಲಭಿಸಿರುವುದಾಗಿ ಕಾಂತಪುರಂ ಉಸ್ತಾದರಿಗೆ ಸಂಬಂಧಿಸಿದಂತೆ ಮರ್ಕಝ್ ಮೂಲಗಳಿಂದ ಮಾಹಿತಿ ಲಭಿಸಿದೆ.
ನಿಮಿಷಪ್ರಿಯ ಬಿಡುಗಡೆ ನೆರವು ಸಮಿತಿಗೆ ಯೆಮೆನ್ ಸುನ್ನಿ ವಿದ್ವಾಂಸ ಶೈಖ್ ಹಬೀಬ್ ಉಮರ್ ಬಿನ್ ಹಾಫಿಝ್ ಮೂಲಕ ಹತ್ಯೆಗೊಳಗಾದ ತಲಾಲ್ ಅಬ್ದುಲ್ ಮಹ್ದಿ ಅವರ ಸಂಬಂಧಿಕರೊಂದಿಗೆ ಮಾತನಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ನೆರವು ಸಮಿತಿಗೆ ಮೃತ ವ್ಯಕ್ತಿಯ ಸಂಬಂಧಿಕರನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಆಶಾದಾಯಕ ಬೆಳವಣಿಗೆಯನ್ನು ನಿರೀಕ್ಷಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ