ಕೋಝಿಕ್ಕೋಡ್ |ಜನರಿಗೆ ಒಳಿತನ್ನು ಮಾಡುವುದು ತನ್ನ ಕರ್ತವ್ಯ ಎಂಬ ನಂಬಿಕೆಯಿಂದ ಯೆಮೆನ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಪಾಲಕ್ಕಾಡ್ ಮೂಲದ ನಿಮಿಷಪ್ರಿಯ ಅವರ ಬಿಡುಗಡೆ ವಿಷಯದಲ್ಲಿ ಮಧ್ಯಪ್ರವೇಶಿಸಿರುವುದಾಗಿ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಇಸ್ಲಾಂ ಒಂದು ಕೋಮು ಚಳುವಳಿಯಲ್ಲ ಎಂದು ಜಗತ್ತಿಗೆ ಕಲಿಸುವುದು ತಮ್ಮ ಗುರಿಯಾಗಿದೆ ಎಂದು ಕಾಂತಪುರಂ ಸ್ಪಷ್ಟಪಡಿಸಿದ್ದಾರೆ. ಮರ್ಕಝ್ನಲ್ಲಿ ನಡೆದ ಯುವ ಕೌಶಲ್ಯ ಸಮ್ಮೇಳನದಲ್ಲಿ ಮಾತನಾಡಿದ ಕಾಂತಪುರಂ ಇದನ್ನು ತಿಳಿಸಿದ್ದಾರೆ. ನಿಮಿಷಪ್ರಿಯ ಅವರ ಬಿಡುಗಡೆಯಲ್ಲಿ ಮಧ್ಯಪ್ರವೇಶಿಸಿದ ನಂತರ ಕಾಂತಪುರಂ ಅವರ ಮೊದಲ ಪ್ರತಿಕ್ರಿಯೆಯಾಗಿದೆ ಇದು.
ಮರಣದಂಡನೆಯ ಬದಲು ಮೃತರ ಸಂಬಂಧಿಕರಿಗೆ ‘ದಿಯಾ’ಧನವನ್ನು ನೀಡುವ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಅವಕಾಶವನ್ನು ಇಸ್ಲಾಂ ಹೊಂದಿದೆ ಇದರ ಆಧಾರದಲ್ಲಿ ನಾವು ಅಲ್ಲಿನ ವಿದ್ವಾಂಸರು ಮತ್ತು ನ್ಯಾಯಾಧೀಶರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಕಾಂತಪುರಂ ಸ್ಪಷ್ಟಪಡಿಸಿದ್ದಾರೆ.
ಚರ್ಚೆಗಳು ಪ್ರಗತಿಯಲ್ಲಿವೆ. ಮೃತರ ಕುಟುಂಬದ ಒಪ್ಪಿಗೆಯಿಲ್ಲದೆ ನ್ಯಾಯಾಲಯವು ಆರೋಪಿಗೆ ಮರಣದಂಡನೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ, ಪ್ರಸ್ತುತ ಅವರ ಕುಟುಂಬದೊಂದಿಗೆ ಚರ್ಚೆಗಳು ನಡೆಯುತ್ತಿವೆ. ಕುಟುಂಬವು ದಿಯಾಧನವನ್ನು ಸ್ವೀಕರಿಸಲು ಸಿದ್ಧವಾಗಿದೆಯೇ ಅಥವಾ ಇಲ್ಲವೇ ಎಂಬುದು ಪ್ರಮುಖ ವಿಷಯವಾಗಿದೆ ಎಂದು ಕಾಂತಪುರಂ ಹೇಳಿದರು.
ಇಸ್ಲಾಂ ಒಂದು ಕೋಮು ಚಳುವಳಿಯಲ್ಲ ಎಂದು ಕಾಂತಪುರಂ ಸ್ಪಷ್ಟಪಡಿಸಿದರು. ಜಗತ್ತಿಗೆ ಅದನ್ನು ಕಲಿಸಲು ಮತ್ತು ಜನರಿಗೆ ಒಳಿತನ್ನು ಮಾಡುವುದು ಕರ್ತವ್ಯವಾಗಿದೆ ಎಂಬ ಕಾರಣಕ್ಕೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲಾಗಿದೆ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ