ಕೋಝಿಕ್ಕೋಡ್ |ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಪಾಲಕ್ಕಾಡ್ ಮೂಲದ ನಿಮಿಷಪ್ರಿಯ ಬಿಡುಗಡೆಗಾಗಿ ಭಾರತೀಯ ಗ್ರಾಂಡ್ ಮುಪ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ನೇತೃತ್ವದ ಮಧ್ಯಸ್ಥಿಕೆ ಫಲ ನೀಡುತ್ತಿದೆ. ನಾಳೆ ನಡೆಯಬೇಕಿದ್ದ ನಿಮಿಷಪ್ರಿಯ ಅವರ ಮರಣದಂಡನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಈ ಸಂಬಂಧ ಯೆಮೆನ್ ಅಧಿಕಾರಿಗಳ ಅಧಿಕೃತ ಪ್ರಕಟಣೆಯನ್ನು ಕಾಂತಪುರಂ ಉಸ್ತಾದರು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ನಿಮಿಷಪ್ರಿಯ ಅವರ ಮರಣದಂಡನೆಯನ್ನು ಮುಂದೂಡುವ ತೀರ್ಪಿನ ಪ್ರತಿಯನ್ನು ಅಧಿಕೃತವಾಗಿ ಸ್ವೀಕರಿಸಲಾಗಿದೆ ಮತ್ತು ಇದಕ್ಕಾಗಿ ಕೆಲಸ ಮಾಡಿದ ಮತ್ತು ಪ್ರಾರ್ಥಿಸಿದ ಎಲ್ಲರಿಗೂ ಅಲ್ಲಾಹನ ಕರುಣೆ ಸಿಗಲಿ ಎಂದು ಕಾಂತಪುರಂ ಉಸ್ತಾದರು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿದ್ದಾರೆ.
ಪಬ್ಲಿಕ್ ಪ್ರಾಸಿಕ್ಯೂಟರ್ ಸೂಚನೆಯ ಮೇರೆಗೆ, ನಾಳೆ ನಡೆಯಬೇಕಿದ್ದ ಭಾರತೀಯ ನಾಗರಿಕ ನಿಮಿಷಾ ಪ್ರಿಯಾ ಟಾಮಿ ಥಾಮಸ್ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಯೆಮೆನ್ ಪಬ್ಲಿಕ್ ಪ್ರಾಸಿಕ್ಯೂಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದಿನ ಆದೇಶ ಬರುವವರೆಗೆ ಮರಣದಂಡನೆ ಶಿಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೆದ ದಿನ ಶಾಸಕ ಚಾಂಡಿ ಉಮ್ಮನ್ ಅವರ ಕೋರಿಕೆಯ ಮೇರೆಗೆ ಕಾಂತಪುರಂ ಉಸ್ತಾದರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದರು. ಕಾಂತಪುರಂ ಉಸ್ತಾದ್ ಅವರ ಕೋರಿಕೆಯ ಮೇರೆಗೆ, ಪ್ರಮುಖ ಯೆಮೆನ್ ವಿದ್ವಾಂಸ ಶೈಖ್ ಹಬೀಬ್ ಉಮರ್ ಬಿನ್ ಹಫೀಝ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದರು. ಎರಡು ದಿನಗಳ ಅನೌಪಚಾರಿಕ ಮಾತುಕತೆಯ ಅಂತಿಮ ಹಂತವಾಗಿ ನಿನ್ನೆ ಎರಡು ಬಾರಿ ಚರ್ಚೆಗಳು ನಡೆದವು. ಶೈಖ್ ಹಬೀಬ್ ಉಮರ್ ಅವರ ಸೋದರಳಿಯ ಹಬೀಬ್ ಅಬ್ದುರಹ್ಮಾನ್ ಅಲಿ ಮಶ್ಹೂರ್ ಚರ್ಚೆಗಳನ್ನು ಮುನ್ನಡೆಸುತ್ತಿದ್ದಾರೆ.

ಯೆಮೆನ್ ಅಧಿಕಾರಿಗಳ ಪ್ರಕಟಣೆ
https://www.facebook.com/share/1B8ukqbmD1/
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ