ತ್ವಾಯಿಫ್: ಸೌದಿ ಅರೇಬಿಯಾದ ತ್ವಾಯಿಫ್ನಲ್ಲಿರುವ ಖಾಸಗಿ ಉದ್ಯಾನವನದಲ್ಲಿ ಯಾಂತ್ರಿಕ ಉಯ್ಯಾಲೆ ಕುಸಿದು ಬಿದ್ದಿದೆ. ಅಲ್-ಹದಾದ ಉದ್ಯಾನವನದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 23 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ನಂತರ ಉದ್ಯಾನವನದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
‘ಗೇಮ್ ಆಫ್ ಡೆತ್’ ಎಂದು ಕರೆಯಲ್ಪಡುವ ಈ ಉಯ್ಯಾಲೆ ಕಾರ್ಯಾಚರಣೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ರಜಾದಿನವನ್ನು ಆಚರಿಸಲು ಆಗಮಿಸಿದ್ದವರು ಅಪಘಾತಕ್ಕೆ ಈಡಾಗಿದ್ದಾರೆ. ಅಪಘಾತದ ಭಯಾನಕ ವೀಡಿಯೊ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿವೆ. ವೀಡಿಯೋ
ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ, ರೆಡ್ ಕ್ರೆಸೆಂಟ್ ಮತ್ತು ನಾಗರಿಕ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಗಾಯಾಳುಗಳನ್ನು ತಕ್ಷಣ ಕಿಂಗ್ ಅಬ್ದುಲ್ ಅಝೀಝ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯ ಬಗ್ಗೆ ನಿಖರವಾದ ತನಿಖೆಯನ್ನು ಘೋಷಿಸಲಾಗಿದೆ. ಉದ್ಯಾನವನದ ಸುರಕ್ಷತಾ ಮಾನದಂಡಗಳು ಮತ್ತು ಅಪಘಾತದ ಕಾರಣಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ