ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಇದರ ಸನ್ನದ್ಧ ಸೇವಾ ತಂಡ ಸಾಂತ್ವನ -ಇಸಾಬ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ಸಲ್ಲಲ್ಲಾಹು ಅಲೈಹಿ ರವರ 1500 ನೇ ಜನ್ಮ ದಿನವನ್ನು ಸ್ವಾಗತಿಸುವ ಸಲುವಾಗಿ ಜಿಲ್ಲಾ ಮಟ್ಟದ ಸ್ವಚ್ಚತಾ ಶಿಬಿರವನ್ನು ವೆನ್ಲಾಕ್ ಆಸ್ಪತ್ರೆಯ ಪರಿಸರವನ್ನು ಸ್ವಚ್ಛ ಗೊಳಿಸುವ ಮೂಲಕ ಉದ್ಘಾಟಿಸಲಾಯಿತು.
ವೆನ್ಲಾಕ್ ಆಸ್ಪತ್ರೆಯ ಡಿ ಎಂ ಒ ಡಾಕ್ಟರ್ ಶಿವಪ್ರಕಾಶ್ ರವರು ಶಿಬಿರವನ್ನು ಉದ್ಘಾಟಿಸಿ, ಸಮಾಜ ಸೇವೆ ಮಾಡಿದರೆ ಅದರಲ್ಲೂ ರೋಗಿಗಳ ಸೇವೆ, ಅವರು ಬರುವ ಆಸ್ಪತ್ರೆಯಲ್ಲಿ ಸೇವೆ ಮಾಡುವುದೆಂದರೆ ಪರಮಾತ್ಮನ ಕೃಪೆಯನ್ನು ಪಡೆಯಲಿಕ್ಕೆ ಸಾಧ್ಯವಿದೆ. ಎಸ್ ವೈ ಎಸ್ ಸಾಂತ್ವನ ಇಸಾಬ ತಂಡದವರು ಸ್ವಯಂ ಸೇವಕ ರಾಗಿ ಬಂದು ಶ್ರಮದಾನ ನಡೆಸುತ್ತಿರುವುದು ಅತ್ಯಂತ ಪ್ರಶಂಸನೀಯ ಎಂದು ಹೇಳಿದರು.
ಸ್ವಚ್ಚತಾ ಶಿಬಿರದಲ್ಲಿ 70ರಷ್ಟು ಇಸಾಬ ಕಾರ್ಯಕರ್ತರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಲು ಸಹಕರಿಸಿದರು.
ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಇದರ ಅಧ್ಯಕ್ಷ ಮಹಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆ ವಹಿಸಿದರು. ಇಸಾಬ ಸಾಂತ್ವನ ದಕ ಜಿಲ್ಲಾ ಮುಖ್ಯಸ್ಥ ಹಾಫಿಳ್ ಯಾಕೂಬ್ ಸಅದಿ ನಾವೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್ ವೈ ಎಸ್ ರಾಜ್ಯ ಕೋಶಾಧಿಕಾರಿ ಮನ್ಸೂರ್ ಅಲಿ ಶಿವಮೊಗ್ಗ, ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷ
ಇಬ್ರಾಹಿಂ ಖಲೀಲ್ ಮಾಲಿಕಿ ಬೋಳಂತೂರು,
ವೆನ್ಲಾಕ್ ಆಸ್ಪತ್ರೆಯ ಆರ್ ಎಂ ಒ ಡಾಕ್ಟರ್ ಸುದಾಕರ್, ಸಹಾಯಕ ಆಡಳಿತಾಧಿಕಾರಿ ಪುಟ್ಟರಾಜು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ, ಬದ್ರುದ್ದೀನ್ ಅಝ್ಹರಿ ಕೈಕಂಬ, ಹಸನ್ ಪಾಂಡೇಶ್ವರ,ಇಸ್ಹಾಕ್ ಉಳ್ಳಾಲ, ಅಬ್ದುಲ್ ಹಕೀಂ ಪೂಮಣ್ಣು, ನಝೀರ್ ಹಾಜಿ ಲುಲು, ಅಶ್ರಫ್ ಮಂಗಳೂರು, ಕೆಸಿ ಸುಲೈಮಾನ್ ಮುಸ್ಲಿಯಾರ್ ಉಪಸ್ಥಿತರಿದ್ದರು.
ಇಸಾಬ ಸಾಂತ್ವನ ಜಿಲ್ಲಾ ಕಾರ್ಯದರ್ಶಿ ಉಮರುಲ್ ಫಾರೂಕ್ ಶೇಡಿಗುರಿ ಸ್ವಾಗತಿಸಿದರು,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ