ದೆಹಲಿ: ಭಾರತದ ರೂಪಾಯಿ ಇತಿಹಾಸದಲ್ಲಿಯೇ ಅತಿದೊಡ್ಡ ಕುಸಿತ ಕಂಡಿದೆ. ಡಾಲರ್ ವಿರುದ್ಧ ರೂಪಾಯಿ ಮೌಲ್ಯ 88.29 ಕ್ಕೆ ಕುಸಿದಿದೆ. ಅಮೆರಿಕವು ಭಾರತದ ಮೇಲೆ ವಿಧಿಸಿದ ಶೇಕಡಾ 50 ರಷ್ಟು ಆಮದು ಸುಂಕದ ನಂತರ ಮಾರುಕಟ್ಟೆಯಲ್ಲಿನ ಕಳವಳಗಳು ಈ ಕುಸಿತಕ್ಕೆ ಕಾರಣವಾಗಿವೆ.
ತೈಲ ಕಂಪನಿಗಳಿಂದ ಡಾಲರ್ಗೆ ಹೆಚ್ಚಿದ ಬೇಡಿಕೆಯೂ ಮೌಲ್ಯ ಕುಸಿತಕ್ಕೆ ಕಾರಣವಾಯಿತು. ಷೇರು ಮಾರುಕಟ್ಟೆಯಲ್ಲಿ ವಿದೇಶಿ ಹೂಡಿಕೆಯೂ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಯಿತು. ಟ್ರಂಪ್ ಅವರ ಸುಂಕಗಳು ಅಂತರರಾಷ್ಟ್ರೀಯ ವ್ಯಾಪಾರ ಕ್ಷೇತ್ರದಲ್ಲಿ ಭಾರತಕ್ಕೆ ಹಾನಿಯಾಗಲಿದೆ ಎಂದು ಬಲವಾಗಿ ಅಂದಾಜಿಸಲಾಗಿದೆ. ರೂಪಾಯಿ ವಿರುದ್ಧ ಚೀನಾದ ಯುವಾನ್ ಹೆಚ್ಚಿನ ಬಲವನ್ನು ಗಳಿಸಿದೆ. ಯುವಾನ್ ವಿರುದ್ಧ ರೂಪಾಯಿ ಇಂದು 12.33 ರ ದಾಖಲೆಯ ಕನಿಷ್ಠ ಮಟ್ಟದಲ್ಲಿದೆ. ರೂಪಾಯಿ ಕುಸಿತದಿಂದಾಗಿ, ಕಚ್ಚಾ ತೈಲ, ಚಿನ್ನ, ಎಲೆಕ್ಟ್ರಾನಿಕ್ಸ್ ಮತ್ತು ಕಚ್ಚಾ ವಸ್ತುಗಳು ಸೇರಿದಂತೆ ಎಲ್ಲಾ ಆಮದು ಉತ್ಪನ್ನಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.
ರೂಪಾಯಿ ಮೌಲ್ಯ ಕುಸಿತವು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ಕಾರಣವಾಗಲಿದೆ. ವಿದೇಶದಲ್ಲಿ ಅಧ್ಯಯನ ಮಾಡುವವರು ಮತ್ತು ವಿದೇಶ ಪ್ರವಾಸ ಮಾಡುವವರು ಪ್ರಯಾಣ ಮತ್ತು ವೆಚ್ಚಗಳಿಗಾಗಿ ಹೆಚ್ಚಿನ ಹಣವನ್ನು ಕೈಯಲ್ಲಿರಿಸಬೇಕಾಗಿದೆ. ಏತನ್ಮಧ್ಯೆ, ರೂಪಾಯಿ ಮೌಲ್ಯ ಕುಸಿತವು ವಿದೇದದಿಂದ ಹಣ ಕಳಿಸುವ ವಲಸಿಗರಿಗೆ ದೊಡ್ಡ ಅನುಕೂಲವಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ