ಹೊಸದಿಲ್ಲಿ: ವಕ್ಸ್ (ತಿದ್ದಪಡಿ) ಕಾಯ್ದೆ-2025ರಡಿ ನೀಡಲಾದ ಆರು ತಿಂಗಳ ಗಡುವು ಶನಿವಾರ ಮುಕ್ತಾಯಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಯಾವುದೇ ಕಾರಣಕ್ಕೆ ಈ ಗಡುವು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಇದುವರೆಗೆ ಅಪ್ಲೋಡ್ ಮಾಡದಿದ್ದಲ್ಲಿ ಅಂಥವರು ವಕ್ಸ್ ನ್ಯಾಯಮಂಡಳಿಯನ್ನು ಸಂಪರ್ಕಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರಂಭಿಸಿದ ಉಮೀದ್ ಸೆಂಟ್ರಲ್ ಪೋರ್ಟಲ್ ನಲ್ಲಿ ಇದುವರೆಗೆ 4.6 ಲಕ್ಷ ವಕ್ಸ್ ಆಸ್ತಿಗಳ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ.
ಆದಾಗ್ಯೂ ಇದುವರೆಗೆ ನೋಂದಾಯಿಸಲು ಸಾಧ್ಯವಾಗದೇ ಇದ್ದಲ್ಲಿ ಅಂಥವರಿಗೆ ಮಾನವೀಯ ಮತ್ತು ಸೌಲಭ್ಯಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವಾಲಯ ಹೇಳಿದೆ. ಮುಂದಿನ ಮೂರು ತಿಂಗಳವರೆಗೆ ಯಾವುದೇ ದಂಡ ಅಥವಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂಬ ಭರವಸೆ ನೀಡಿದೆ.
ಈ ಮೂಲಕ ಸಕಾರಣಗಳಿಂದಾಗಿ ನೋಂದಣಿಗೆ ಅಪ್ಲೋಡ್ ಮಾಡಲು ಸಾಧ್ಯವಾಗದವರಿಗೆ ನ್ಯಾಯಮಂಡಳಿಯ ಮೊರೆ ಹೋಗುವ ಅವಕಾಶ ನೀಡಲಾಗುತ್ತಿದೆ ಎಂದು ವಿವರಿಸಿದೆ.
ಕಾನೂನಿನ ಪ್ರಕಾರ, ಗಡುವಿನ ಒಳಗಾಗಿ ಸಲ್ಲಿಕೆ ಮಾಡಲು ಸಾಧ್ಯವಾಗದೇ ಇರುವುದಕ್ಕೆ ಕಾರಣ ತೃಪ್ತಿದಾಯಕ ಎಂದು ನ್ಯಾಯಾಧಿಕರಣಕ್ಕೆ ಅನಿಸದಲ್ಲಿ ಮಾತ್ರ ಮುಂದಿನ ಆರು ತಿಂಗಳವರೆಗೆ ವಿಸ್ತರಣೆಗೆ ಅವಕಾಶವಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿಕೆಯನ್ನು ಕೂಡಾ ಸಚಿವಾಲಯ ಬಿಡುಗಡೆ ಮಾಡಿದೆ. “ಕಾಯ್ದೆಯಡಿ ನೀಡಿರುವ ಆರು ತಿಂಗಳ ಕಡ್ಡಾಯ ಗಡುವು ಮುಕ್ತಾಯವಾಗಿದೆ. ಕಾನೂನಿನ ನಿಬಂಧನೆಗಳ ಅನುಸಾರ ಮತ್ತು ಸುಪ್ರೀಂಕೋರ್ಟ್ನ ಸ್ಪಷ್ಟ ನಿರ್ದೇಶನದ ಕಾರಣದಿಂದ ಇದನ್ನು ವಿಸ್ತರಿಸಲಾಗದು” ಎಂದು ರಿಜಿಜು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ