ಟೆಹ್ರಾನ್ | ನಾಗರಿಕ ಅಶಾಂತಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಅಮೆರಿಕ ಮಿಲಿಟರಿ ಕ್ರಮ ಕೈಗೊಳ್ಳಬಹುದು ಎಂಬ ಆತಂಕದ ನಡುವೆ, ಇರಾನ್ ಐದು ಗಂಟೆಗಳ ನಂತರ ಮುಚ್ಚಿದ ವಾಯುಪ್ರದೇಶವನ್ನು ಮತ್ತೆ ತೆರೆದಿದೆ.
ವಾಯುಪ್ರದೇಶ ಮುಚ್ಚುವಿಕೆಯು ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ ಮೇಲೆ ತೀವ್ರ ಪರಿಣಾಮ ಬೀರಿದ್ದು, ಕೆಲವು ವಿಮಾನಗಳನ್ನು ರದ್ದುಗೊಳಿಸುವುದು, ಮಾರ್ಗ ಬದಲಿಸಲಿಸುವುದು ಅಥವಾ ವಿಳಂಬಗೊಳಿಸುವುದು ಎಂಬುವುದು ಅನಿವಾರ್ಯ ವಾಗಿತ್ತು.
ನಿನ್ನೆ ಸಂಜೆ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿದ ನಂತರ ಸುಮಾರು ಐದು ಗಂಟೆಗಳ ಬಳಿಕ ಮತ್ತೆ ತೆರೆಯಲಾಯಿತು. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ, ಇರಾನ್ನ ವಾಯುಪ್ರದೇಶವನ್ನು ಹಠಾತ್ತನೆ ಮುಚ್ಚುವುದರಿಂದ ಅದರ ಕೆಲವು ಅಂತರರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿತ್ತು,
ಹೆಚ್ಚುತ್ತಿರುವ ಕಳವಳಗಳ ನಡುವೆ, ಟೆಹ್ರಾನ್ನಲ್ಲಿರುವ ಬ್ರಿಟಿಷ್ ರಾಯಭಾರ ಕಚೇರಿಯನ್ನು ಸಹ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕತಾರ್ನಲ್ಲಿರುವ ವಾಯುನೆಲೆಯಿಂದ ಅಮೆರಿಕ ಕೆಲವು ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳಲು ಪ್ರಾರಂಭಿಸಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ. ಸ್ಪೇನ್, ಇಟಲಿ ಮತ್ತು ಪೋಲೆಂಡ್ ತಮ್ಮ ನಾಗರಿಕರನ್ನು ಇರಾನ್ ತೊರೆಯುವಂತೆ ಕೇಳಿಕೊಂಡಿವೆ.
ಈಗ ಪರಿಸ್ಥಿತಿ ಶಾಂತವಾಗಿದೆ. ಎಲ್ಲವೂ ನಿಯಂತ್ರಣದಲ್ಲಿದೆ ಮತ್ತು ನಾವು ಉದ್ವಿಗ್ನ ಪರಿಸ್ಥಿತಿಯತ್ತ ತಲುಪುವುದನ್ನು ಬಯಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ ಹೇಳಿದರು.
ಏತನ್ಮಧ್ಯೆ, ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸುವುದಾಗಿ ಅಮೆರಿಕ ಬೆದರಿಕೆ ಹಾಕಿದ ನಂತರ, ಸೌದಿ ಅರೇಬಿಯಾ ತನ್ನ ವಾಯುಪ್ರದೇಶ ಅಥವಾ ದೇಶವನ್ನು ಇರಾನ್ ಮೇಲೆ ದಾಳಿ ಮಾಡಲು ಅನುಮತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
















ಇನ್ನಷ್ಟು ಸುದ್ದಿಗಳು
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ