ಜಿಝಾನ್: ಹೊಸ ಜಿಝಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯನ್ನು ಮತ್ತು ಸ್ಥಳದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಜಿಝಾನ್ ಪ್ರದೇಶದ ಗವರ್ನರ್ ಪ್ರಿನ್ಸ್ ಮುಹಮ್ಮದ್ ಬಿನ್ ಅಬ್ದುಲ್ಅಝೀಝ್ ಬಿನ್ ಮುಹಮ್ಮದ್ ಬಿನ್ ಅಬ್ದುಲ್ಅಝೀಝ್ ಅವರು ಪರಿಶೀಲಿಸಿದ್ದಾರೆ.
ವಿಮಾನ ನಿಲ್ದಾಣವು ನಿರ್ಮಾಣ ಕಾಮಗಾರಿಯು 92% ಪೂರ್ಣಗೊಂಡಿದ್ದು, ವಾರ್ಷಿಕವಾಗಿ 5.4 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. ಪ್ರಯಾಣಿಕರ ಅನುಭವ ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಉನ್ನತ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ನಿರ್ಮಿಸಲಾದ ಆಧುನಿಕ ಸೌಲಭ್ಯಗಳು ಮತ್ತು ಸೇವೆಗಳನ್ನು ಇದು ಒಳಗೊಂಡಿರುತ್ತದೆ.
ಸರಿಸುಮಾರು 48 ಮಿಲಿಯನ್ ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಈ ವಿಮಾನ ನಿಲ್ದಾಣವು 57,000 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಮುಖ್ಯ ಪ್ರಯಾಣಿಕರ ಟರ್ಮಿನಲ್ ಅನ್ನು ಒಳಗೊಂಡಿದೆ.
12 ಬೋರ್ಡಿಂಗ್ ಗೇಟ್ಗಳು, 10 ಏರ್ ಕ್ರಾಫ್ಟ್ ಬ್ರಿಡ್ಜುಗಳು , 32 ಚೆಕ್-ಇನ್ ಕೌಂಟರ್ಗಳು, ಎಂಟು ಸೆಲ್ಫ್ ಸರ್ವೀಸ್ ಕಿಯೋಸ್ಕ್ಗಳು ಮತ್ತು 2,000 ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯಗಳು ಸಹ ಇರಲಿವೆ.
ನಾಲ್ಕು ವೈಟಿಂಗ್ ಲಾಂಚ್ ಗಳು, ಗಂಟೆಗೆ 2,400 ಲಗೇಜುಗಳನ್ನು ಸಾಗಿಸಬಹುದಾದ ಸ್ಮಾರ್ಟ್ ಹ್ಯಾಂಡ್ಲಿಂಗ್ ವ್ಯವಸ್ಥೆಯನ್ನು ಹೊಂದಿರುವ ನಾಲ್ಕು ಬ್ಯಾಗೇಜ್ ಬೆಲ್ಟ್ಗಳು ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ