ಅಬುಧಾಬಿ: 2026 ಕ್ಕೆ ಪ್ರವೇಶಿಸುತ್ತಿದ್ದಂತೆ, ಯುಎಇ ರಾಜಧಾನಿ ಅಬುಧಾಬಿ ಮತ್ತೊಮ್ಮೆ ವಿಶ್ವದ ಸುರಕ್ಷಿತ ನಗರವಾಗಿ ಹೊರ ಹೊಮ್ಮಿದೆ. ಜಾಗತಿಕ ಅಂಕಿಅಂಶಗಳ ವೇದಿಕೆ ‘ನಂಬಿಯೊ’ ಬಿಡುಗಡೆ ಮಾಡಿದ ಜಾಗತಿಕ ಸುರಕ್ಷಿತ ನಗರಗಳ ಸೂಚ್ಯಂಕದಲ್ಲಿ ಅಬುಧಾಬಿ 2017 ರಿಂದ ಸತತ ಹತ್ತನೇ ಬಾರಿಗೆ ಅಗ್ರಸ್ಥಾನದಲ್ಲಿದೆ. 150 ದೇಶಗಳ 400 ನಗರಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ 89.0 ಅಂಕಗಳನ್ನು ಕಾಯ್ದುಕೊಳ್ಳುವ ಮೂಲಕ ಈ ಸಾಧನೆಯನ್ನು ಸಾಧಿಸಿದೆ.
ಪಟ್ಟಿಯಲ್ಲಿರುವ ಮೊದಲ ಆರು ನಗರಗಳಲ್ಲಿ ಐದು ಯುಎಇಯಿಂದ ಬಂದಿವೆ. ಮೊದಲ ಹತ್ತರಲ್ಲಿ, ಕತಾರ್ ರಾಜಧಾನಿ ದೋಹಾ ನಾಲ್ಕನೇ ಸ್ಥಾನ ಮತ್ತು ಒಮಾನ್ನ ಮಸ್ಕತ್ ಎಂಟನೇ ಸ್ಥಾನ ಪಡೆದುಕೊಂಡಿವೆ. ರಾತ್ರಿಯಲ್ಲಿ ಒಂಟಿಯಾಗಿ ನಡೆಯುವಾಗ ಸುರಕ್ಷತೆ, ಹಗಲಿನಲ್ಲಿ ಒಂಟಿಯಾಗಿ ನಡೆಯುವಾಗ ಸುರಕ್ಷತೆ, ಕಡಿಮೆ ಅಪರಾಧ ದರಗಳು, ಉತ್ತಮ ಗುಣಮಟ್ಟದ ಜೀವನ ಮತ್ತು ಭದ್ರತಾ ವ್ಯವಸ್ಥೆಗಳ ಆಧಾರದ ಮೇಲೆ ನಂಬಿಯೊ ನಗರಗಳನ್ನು ಶ್ರೇಣೀಕರಿಸಿದೆ.
400 ನಗರಗಳ ಪೈಕಿ ಭಾರತದ ಮಂಗಳೂರು 51 ನೇ ಸ್ಥಾನವನ್ನು ಪಡೆದುಕೊಂಡಿದ್ದು, ಭಾರತದಲ್ಲಿ ಅಗ್ರಸ್ಥಾನದಲ್ಲಿದೆ.
89 ರಾಷ್ಟ್ರಗಳ ಪೈಕಿ ಯುಎಇ ಅಗ್ರಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಖತರ್ ಮತ್ತು ಮೂರನೇ ಸ್ಥಾನದಲ್ಲಿ ತೈವಾನ್. ಹನ್ನೊಂದನೇ ಸ್ಥಾನದಲ್ಲಿ ಸೌದಿ ಅರೇಬಿಯಾ ಹಾಗೂ ಭಾರತ 53 ನೇ ಸ್ಥಾನದಲ್ಲಿದೆ. ಪಾಕಿಸ್ತಾನ ಭಾರತಕ್ಕಿಂತ ಹೆಚ್ಚಿನ ಸುರಕ್ಷಿತ ರಾಷ್ಟ್ರವಾಗಿದೆ ಇದು 47 ನೇ ಸ್ಥಾನದಲ್ಲಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ