ರಿಯಾದ್: ಸೌದಿ ಅರೇಬಿಯಾದಲ್ಲಿ ಪವಿತ್ರ ರಂಜಾನ್ ತಿಂಗಳ ಆಗಮನದ ಮುಂಚಿತವಾಗಿ ಮಸೀದಿಗಳಿಗೆ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಂಜಾನ್ ಸಮಯದಲ್ಲಿ ವಿಶ್ವಾಸಿಗಳಿಗೆ ಸುರಕ್ಷಿತ ಮತ್ತು ಆಧ್ಯಾತ್ಮಿಕ ವಾತಾವರಣವನ್ನು ಒದಗಿಸುವ ಪ್ರಯತ್ನಗಳ ಭಾಗವಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಉಮ್ ಅಲ್-ಖುರಾ ಕ್ಯಾಲೆಂಡರ್ ಪ್ರಕಾರ ಪ್ರಾರ್ಥನೆ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಇಶಾ-ಫಜ್ರ್ ಅಝಾನ್ ನಂತರ ಕೇವಲ 15 ನಿಮಿಷಗಳ ಬಳಿಕವೇ ನಮಾಜ್ ಪ್ರಾರಂಭಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಮಸೀದಿ ನೌಕರರ ಹಾಜರಾತಿಯನ್ನು ಕಡ್ಡಾಯಗೊಳಿಸಿರುವ ಸಚಿವಾಲಯ, ರಜೆ ಅಗತ್ಯವಿರುವವರು ಮುಂಚಿತವಾಗಿ ಬದಲಿಗಳನ್ನು ನೇಮಿಸಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ. ರಂಜಾನ್‌ನ ಕೊನೆಯ ಹತ್ತು ದಿನಗಳ ಖಿಯಾಮುಲ್ಲೈಲಿ (ರಾತ್ರಿ ನಮಾಜ್)ಯನ್ನು ಬೆಳಗಿನ ಜಾವದ ಮುಂಚಿತವಾಗಿ ವಿಶ್ವಾಸಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.
ಮಸೀದಿಗಳಲ್ಲಿ ಇಅ್ತಿಕಾಫ್‌ನಲ್ಲಿ ಕುಳಿತುಕೊಳ್ಳುವವರು ಸರಿಯಾಗಿ ನೋಂದಾಯಿಸಿಕೊಳ್ಳಬೇಕು ಮತ್ತು ಅವರು ವಿದೇಶಿಯರಾಗಿದ್ದರೆ, ಪ್ರಾಯೋಜಕರ ಅನುಮತಿ ಪತ್ರವನ್ನು ಹೊಂದಿರಬೇಕು ಎಂದು ಸಚಿವಾಲಯ ತಿಳಿಸಿದೆ. ಮಸೀದಿ ಆವರಣದಲ್ಲಿ ಭಿಕ್ಷಾಟನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಯಾವುದೇ ಉಲ್ಲಂಘನೆಗಳು ಕಂಡುಬಂದರೆ ನೌಕರರು ತಕ್ಷಣ ಭದ್ರತಾ ಅಧಿಕಾರಿಗಳಿಗೆ ತಿಳಿಸಬೇಕು. ಸಚಿವಾಲಯವು ಮಸೀದಿಗಳ ದೈನಂದಿನ ತಪಾಸಣೆ ನಡೆಸುತ್ತದೆ ಮತ್ತು ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ