ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಗೇಟ್ಗಳಲ್ಲಿ ಮುಂಬರುವ ಏ.1ರಿಂದ ನಗದು ಪಾವತಿಗೆ ಅವಕಾಶವಿಲ್ಲ. ವಾಹನ ಚಾಲಕರು ಕಡ್ಡಾಯವಾಗಿ ಮೊತ್ತವನ್ನು ಡಿಜಿಟಲ್ ವಿಧಾನದಲ್ಲೇ ಅಂದರೆ ಫಾಸ್ಟ್ಯಾಗ್ ಅಥವಾ ಯುಪಿಐ ಮೂಲಕವೇ ಪಾವತಿಸಬೇಕಾಗುತ್ತದೆ. ದೇಶಾದ್ಯಂತ ನೂತನ ವ್ಯವಸ್ಥೆ ಹೊಸ ಹಣಕಾಸು ವರ್ಷದ ಆರಂಭದ ದಿನ ಜಾರಿಗೆ ಬರಲಿದೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಪ್ರಸ್ತುತ ನಿಯಮಾವಳಿಗಳ ಪ್ರಕಾರ, ಟೋಲ್ ಪ್ಲಾಝಾ ದಾಟುವ ವಾಹನಗಳು ಫಾಸ್ಟ್ಯಾಗ್ ಹೊಂದಿಲ್ಲದಿದ್ದಲ್ಲಿ, ನಗದು ರೂಪದಲ್ಲಿ ಪಾವತಿಸುವಾಗ ಅನ್ವಯವಾಗುವ ಸುಂಕದ 1.25 ಪಟ್ಟು ತೆರಬೇಕಾಗುತ್ತದೆ. ನಗದು ಪಾವತಿಯನ್ನು ಕಡಿಮೆ ಮಾಡುವ ಸಲುವಾಗಿ ಯುಪಿಐ ಮೂಲಕ ಪಾವತಿಯನ್ನು ನವೆಂಬರ್ನಲ್ಲಿ ಆರಂಭಿಸಲಾಗಿತ್ತು. ಸಂಗ್ರಹವಾಗುವ ಒಟ್ಟು ಸುಂಕದ ಪೈಕಿ ಶೇಕಡ 2ರಷ್ಟು ಯುಪಿಐ ಮೂಲಕ ಸಂಗ್ರಹವಾಗುತ್ತಿದೆ. ಶೇಕಡ 1ರಷ್ಟು ಪಾವತಿಯಾಗುತ್ತಿರುವ ನಗದು ಪಾವತಿಯನ್ನು ಇದೀಗ ಸ್ಥಗಿತಗೊಳಿಸಲಾಗುತ್ತಿದೆ. ತಿಂಗಳುಗಳ ಹಿಂದೆ ಅರ್ಧದಷ್ಟು ಸಂಗ್ರಹ ನಗದು ರೂಪದಲ್ಲಿ ಆಗುತ್ತಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ