ಮನಾಮ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಅರಬ್ ರಾಷ್ಟ್ರವಾದ ಬಹ್ರೇನ್ನಲ್ಲೂ ಸರಣಿ ಸ್ಫೋಟಗಳು ಸಂಭವಿಸಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
ಜೂಫೈರ್ ಮೇಲೆ ದಾಳಿ:
ಅಮೆರಿಕದ ನೌಕಾಪಡೆ ನೆಲೆ (US Naval Base) ಇರುವ ಬಹ್ರೇನ್ನ ಪ್ರಮುಖ ಪ್ರದೇಶವಾದ ಜೂಫೈರ್ (Juffair) ಅನ್ನು ಗುರಿಯಾಗಿಸಿಕೊಂಡು ನಿರಂತರ ಸ್ಫೋಟಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ದೇಶದ ಒಳಭಾಗದಲ್ಲಿ ದಾಳಿ ನಡೆದಿರುವುದನ್ನು ಬಹ್ರೇನ್ ಸರ್ಕಾರ ಅಧಿಕೃತವಾಗಿ ಖಚಿತಪಡಿಸಿದೆ.
ಸೈರನ್ ಮೊಳಗಿದ ದೇಶ:
ಸ್ಫೋಟದ ಭೀಕರ ಶಬ್ದ ಕೇಳಿಬರುತ್ತಿದ್ದಂತೆ ಇಡೀ ದೇಶದಾದ್ಯಂತ ಅಪಾಯದ ಮುನ್ನೆಚ್ಚರಿಕೆ ನೀಡುವ ‘ಸೈರನ್’ಗಳು ಮೊಳಗಿವೆ. ಇದು ಸಾರ್ವಜನಿಕರಲ್ಲಿ ಭಾರೀ ಭಯವನ್ನುಂಟು ಮಾಡಿದೆ. ಪ್ರಾದೇಶಿಕ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯನ್ನು ಜಗತ್ತು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಅಧಿಕೃತ ಸೂಚನೆ:
ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಸಾರ್ವಜನಿಕರು ಭಯಭೀತರಾಗಬಾರದು ಮತ್ತು ಶಾಂತಿ ಕಾಪಾಡಿಕೊಳ್ಳಬೇಕು ಎಂದು ಬಹ್ರೇನ್ ಆಡಳಿತ ಮನವಿ ಮಾಡಿದೆ. ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ, ಕೇವಲ ಅಧಿಕೃತ ಸರ್ಕಾರಿ ಪ್ರಕಟಣೆಗಳನ್ನು ಮಾತ್ರ ಅನುಸರಿಸಬೇಕೆಂದು ಅಧಿಕಾರಿಗಳು ಜನರಿಗೆ ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ