ಟೆಹ್ರಾನ್ : ಇರಾನ್ನ ಪರಮೋನ್ನತ ನಾಯಕ ಆಯತೊಲ್ಲಾ ಅಲಿ ಖಮೇನಿ (86) ಅವರು ನಿಧನರಾಗಿದ್ದಾರೆ ಎಂದು ಇರಾನ್ನ ಸರ್ಕಾರಿ ದೂರದರ್ಶನ ಅಧಿಕೃತವಾಗಿ ಘೋಷಿಸಿದೆ. ಖಮೆನೈ ಅವರು ‘ಹುತಾತ್ಮರಾಗಿದ್ದಾರೆ’ ಎಂದು ತಿಳಿಸಿರುವ ಇರಾನ್ ಸರ್ಕಾರ, ಅವರ ಗೌರವಾರ್ಥವಾಗಿ ದೇಶಾದ್ಯಂತ 40 ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಅಲ್ಲದೆ, ಮುಂದಿನ ಏಳು ದಿನಗಳ ಕಾಲ ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ.
ಹಿನ್ನೆಲೆ ಮತ್ತು ಬೆಳವಣಿಗೆ:
1989 ರಿಂದ ಇರಾನ್ನ ಪರಮೋನ್ನತ ನಾಯಕರಾಗಿ ಅಧಿಕಾರ ನಡೆಸುತ್ತಿದ್ದ ಖಮನೈ ಅವರು ಇಸ್ರೇಲ್ ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಅಮೆರಿಕ ಮತ್ತು ಇಸ್ರೇಲ್ ಈ ಹಿಂದೆಯೇ ಪ್ರತಿಪಾದಿಸಿದ್ದವು. ಆದರೆ, ಇರಾನ್ ಈ ಸುದ್ದಿಯನ್ನು ಈವರೆಗೆ ದೃಢಪಡಿಸಿರಲಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮೊದಲೇ ಮಾಹಿತಿ ನೀಡಿದ್ದರು.
ಕುಟುಂಬದ ಸದಸ್ಯರು ಮೃತ್ಯು:
ವರದಿಗಳ ಪ್ರಕಾರ, ಈ ದಾಳಿಯಲ್ಲಿ ಖಮೆನೈ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗ ಕೂಡ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ವಿಶೇಷವೆಂದರೆ, ಇಸ್ರೇಲ್ ಸೇನೆಯ ಅಧಿಕೃತ ‘ಹಿಟ್ ಲಿಸ್ಟ್’ನಲ್ಲಿ ಖಮೆನೈ ಅವರ ಹೆಸರು ಇರಲಿಲ್ಲ ಎನ್ನಲಾಗಿದೆ.
ಖಮೆನೈ ಅವರ ನಿಧನವು ಪಶ್ಚಿಮ ಏಷ್ಯಾದ ರಾಜಕೀಯ ಪರಿಸ್ಥಿತಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇಡೀ ವಿಶ್ವದ ಗಮನ ಈಗ ಇರಾನ್ನ ಮುಂದಿನ ನಡೆಯತ್ತ ನೆಟ್ಟಿದೆ.
ಗಲ್ಫ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ:
ಮತ್ತೊಂದೆಡೆ, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚಾಗಿದ್ದು, ಗಲ್ಫ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿಗಳು ಮುಂದುವರಿದಿವೆ. ದುಬೈ ಮತ್ತು ಕತಾರ್ ಮೇಲೆ ಮತ್ತೆ ಕ್ಷಿಪಣಿ ದಾಳಿ ನಡೆದಿದೆ. ಬಹ್ರೇನ್ನ ಜುಫೈರ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಇರಾನ್ ಮಧ್ಯರಾತ್ರಿಯೂ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಇಸ್ರೇಲ್ನಲ್ಲಿ ಸಾವು-ನೋವು:
ಇಸ್ರೇಲ್ ಮೇಲಿನ ಇರಾನ್ ಪ್ರತಿದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ. ವಾಣಿಜ್ಯ ನಗರಿ ತೆಲ್ ಅವಿವ್ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ ಪರಿಣಾಮ ವ್ಯಾಪಕ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಇಡೀ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯುದ್ಧವು ಮತ್ತಷ್ಟು ಭೀಕರ ಸ್ವರೂಪ ಪಡೆಯುವ ಸಾಧ್ಯತೆಯಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ