ಮಂಗಳೂರು, ಮಾ.19: ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ, ಕರಾವಳಿ ಸೇರಿದಂತೆ ನಾಡಿನಾದ್ಯಂತ ನಾಳೆ (ಮಾ. 20, ಶುಕ್ರವಾರ) ಪವಿತ್ರ ‘ಈದುಲ್ ಫಿತರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ ಖಾಝಿಗಳು ಕರೆ ನೀಡಿದ್ದಾರೆ.
ರಮಳಾನ್ ತಿಂಗಳ 29ನೇ ಉಪವಾಸದ ದಿನವಾದ ಇಂದು ಚಂದ್ರ ದರ್ಶನವಾಗಿರುವುದರಿಂದ, ನಾಳೆ ಶವ್ವಾಲ್ ಮಾಸದ ಪ್ರಥಮ ದಿನವಾಗಿದ್ದು ಈದ್ ಆಚರಣೆ ಅಧಿಕೃತಗೊಂಡಿದೆ. ಈ ಕುರಿತು ಅಖಿಲ ಭಾರತ ಸುನ್ನೀ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹಾಗೂ ಉಳ್ಳಾಲ ಖಾಝಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ (ಕಾಂತಪುರಂ ಉಸ್ತಾದ್), ಮಂಗಳೂರು ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಹಾಗೂ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಮಾಣಿ ಉಸ್ತಾದ್ ಅವರ ಕಚೇರಿಗಳಿಂದ ಹೊರಡಿಸಿದ ಪ್ರಕಟಣೆಯಲ್ಲಿ ವಿಶ್ವಾಸಿಗಳಿಗೆ ಹಬ್ಬದ ಶುಭಾಶಯ ಕೋರಿದ್ದಾರೆ.
ತ್ಯಾಗ ಮತ್ತು ಶಿಸ್ತಿನ ಸಮಾರೋಪ
ಕಳೆದ ಒಂದು ತಿಂಗಳ ಕಾಲ ಕಠಿಣ ಉಪವಾಸ ವ್ರತ, ದಾನ-ಧರ್ಮ ಹಾಗೂ ವಿಶೇಷ ಪ್ರಾರ್ಥನೆಗಳಲ್ಲಿ ತೊಡಗಿದ್ದ ಮುಸ್ಲಿಂ ಬಾಂಧವರಿಗೆ ಈದುಲ್ ಫಿತರ್ ಸಾರ್ಥಕತೆಯ ಕ್ಷಣವಾಗಿದೆ. ಕೆಡುಕುಗಳಿಂದ ದೂರವಿದ್ದು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ನಿರಂತರ ಶ್ರಮಕ್ಕೆ ಈ ಹಬ್ಬವು ಮೌಲ್ಯದ ಮುದ್ರೆ ಒತ್ತುತ್ತದೆ.
ಮಾನವೀಯತೆಯ ‘ಫಿತರ್ ಝಕಾತ್’
ಈದ್ ದಿನದಂದು ಸಮಾಜದಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಉದಾತ್ತ ಉದ್ದೇಶದಿಂದ ‘ಫಿತರ್ ಝಕಾತ್’ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಯಾ ಭಾಗದ ಮುಖ್ಯ ಆಹಾರ ಧಾನ್ಯಗಳನ್ನು ಬಡವರಿಗೆ ಹಂಚುವ ಮೂಲಕ ಹಬ್ಬದ ಸಡಗರದಲ್ಲಿ ಎಲ್ಲರನ್ನೂ ಒಳಗೊಳ್ಳುವುದು ಈ ಸಂಪ್ರದಾಯದ ವಿಶೇಷ.
ನಾಡಿನ ಸರ್ವರಿಗೂ ಈದುಲ್ ಫಿತರ್ ಹಬ್ಬದ ಶುಭಾಶಯಗಳು
ಪರಸ್ಪರ ಸ್ನೇಹ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಸಾರುವ ಈ ಹಬ್ಬವು ಸಮಾಜದಲ್ಲಿ ಶಾಂತಿ-ನೆಮ್ಮದಿಯನ್ನು ಹೆಚ್ಚಿಸಲಿ. ಗಲ್ಫ್ ದೇಶಗಳಲ್ಲಿ ತಲೆದೋರಿರುವ ಯುದ್ಧದ ಕಾರ್ಮೋಡಗಳು ಆದಷ್ಟು ಬೇಗ ತಿಳಿಯಾಗಲಿ, ಶಾಂತಿ ಮತ್ತು ನೆಮ್ಮದಿಯ ವಾತಾವರಣ ಮರುಕಳಿಸಲಿ ಎಂದು ಪ್ರಾರ್ಥಿಸೋಣ.
ನಾಡಿನಲ್ಲೂ, ಒಮಾನ್ ಸಹಿತವಿರುವ ಗಲ್ಫ್ ರಾಷ್ಟ್ರಗಳಲ್ಲೂ ಈ ಬಾರಿ ಒಂದೇ ದಿನ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಗುತ್ತಿದ್ದು ವಿಶೇಷ.
ಶುಭಾಶಯಗಳೊಂದಿಗೆ, ಜನಧ್ವನಿ ಪತ್ರಿಕಾ ಬಳಗ
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ