ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಶನಿವಾರ ತಡರಾತ್ರಿ ಸಂಚಲನ ಉಂಟಾಗಿದ್ದು, ನಗರದ ಹೈ-ಪ್ರೊಫೈಲ್ ಪ್ರದೇಶವಾದ ಅಲ್-ಮನ್ಸೂರ್ನಲ್ಲಿರುವ ರಾಷ್ಟ್ರೀಯ ಗುಪ್ತಚರ ಸಂಸ್ಥೆಯ (National Intelligence Service) ಪ್ರಧಾನ ಕಚೇರಿಯ ಆವರಣದಲ್ಲಿ ಡ್ರೋನ್ ಒಂದು ಪತನಗೊಂಡಿದೆ.
ಇರಾಕ್ನ ಅಧಿಕೃತ ಸುದ್ದಿಸಂಸ್ಥೆಯಾದ ‘ಇರಾಕಿ ನ್ಯೂಸ್ ಏಜೆನ್ಸಿ’ (INA) ಮತ್ತು ‘ಸೆಕ್ಯೂರಿಟಿ ಮೀಡಿಯಾ ಸೆಲ್’ ಈ ಘಟನೆಯನ್ನು ದೃಢಪಡಿಸಿವೆ. ಗುಪ್ತಚರ ಇಲಾಖೆಯ ಮುಖ್ಯ ಕಚೇರಿಯ ಆವರಣದೊಳಗೆ ಡ್ರೋನ್ ಬಿದ್ದಿರುವುದು ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.
ತನಿಖೆ ಪ್ರಗತಿಯಲ್ಲಿ:
ಈ ಡ್ರೋನ್ ಯಾವ ದೇಶಕ್ಕೆ ಸೇರಿದ್ದು? ಇದು ಕಣ್ಗಾವಲು ಉದ್ದೇಶ ಹೊಂದಿದ್ದೇ ಅಥವಾ ದಾಳಿಗೆ ಸಂಚು ರೂಪಿಸಿತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ಈವರೆಗೆ ವರದಿಯಾಗಿಲ್ಲ. ಸ್ಥಳಕ್ಕೆ ಭದ್ರತಾ ಪಡೆಗಳು ಧಾವಿಸಿದ್ದು, ತಪಾಸಣೆ ತೀವ್ರಗೊಳಿಸಿವೆ.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ