ರಿಯಾದ್: ವಿದೇಶೀ ಕಾರ್ಮಿಕರನ್ನು ಜಾಹಿರಾತು ಮೂಲಕ ಬರ ಮಾಡಿಕೊಳ್ಳುವುದು ಕಾನೂನಿನ ಉಲ್ಲಂಘನೆಯಾಗಿದೆ ಎಂದು ಸೌದಿ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.
ಜಾಹಿರಾತು ನೀಡಿ ವಿದೇಶಿಗಳ ನೇಮಕಾತಿ ಮಾಡುವುದು ರಿಕ್ರೂಟ್ಮೆಂಟ್ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಸಚಿವಾಲಯ ಹೇಳಿದೆ.
ಸೌದಿಯಲ್ಲಿನ ಟೆಲಿಕಾಂ ಕಂಪೆನಿಯ ಉದ್ಯೋಗ ನೇಮಕಾತಿ ಕುರಿತು ಜೋರ್ಡಾನ್ ಸರ್ಕಾರದ ನೇಮಕಾತಿ ಏಜೆನ್ಸಿಯು ಒಂದು ಜಾಹೀರಾತನ್ನು ಪ್ರಕಟಿಸಿತ್ತು.ಇದರ ವಿರುದ್ದ ಸೌದಿಯ ನಿರುದ್ಯೋಗಿ ಯುವಕರು ಈ ಕುರಿತು ದೂರು ನೀಡಿದ ಹಿನ್ನಲೆಯಲ್ಲಿ ಸೌದಿ ಅರೇಬಿಯಾದಲ್ಲಿನ ನೇಮಕಾತಿ ಬಗ್ಗೆ ಜಾಹೀರಾತು ನೀಡುವಂತಿಲ್ಲ ಎಂದು ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ವ್ಯಕ್ತ ಪಡಿಸಿದೆ.
ಸೌದಿ ಅರೇಬಿಯಾದಲ್ಲಿನ ನಿರುದ್ಯೋಗವನ್ನು ಕಡಿಮೆ ಗೊಳಿಸುವ ಸಲುವಾಗಿ ಸ್ವದೇಶೀಕರಣ ಮುಂತಾದ ಕ್ರಮಗಳನ್ನು ತ್ವರಿತಗತಿಯಲ್ಲಿ ಮಾಡಲಾಗುತ್ತಿದೆ.ಆದಾಗ್ಯೂ, ಇತ್ತೀಚಿನ ಅಂಕಿಯಂಶಗಳ ಪ್ರಕಾರ, ನಿರುದ್ಯೋಗ ಸಂಖ್ಯೆ ಹೆಚ್ಚಾಗಿರುವುದಾಗಿ ವರದಿಯಾಗಿದೆ.
ಸೌದಿ ಅರೇಬಿಯಾದಲ್ಲಿನ ನಿರುದ್ಯೋಗ ದರವು ಈ ವರ್ಷ ಮಾರ್ಚ್ ನಿಂದ 12.9 ಶೇಕಡಾದಷ್ಟಿದೆ.ಇದು ಕಳೆದ ವರ್ಷ 12.8 ರಷ್ಟು ಆಗಿತ್ತು. ಈ ವರ್ಷದ ಮೊದಲ ಅರ್ಧದಲ್ಲಿ ಪುರುಷರ ನಿರುದ್ಯೋಗ ದರವು ಶೇ. 7.6 ಕ್ಕೆ ಏರಿದೆ.
ಅದೇ ವೇಳೆಗೆ, ಕಳೆದ 15 ತಿಂಗಳುಗಳಲ್ಲಿ ವಿದೇಶಿ ಕಾರ್ಮಿಕರ ಸಂಖ್ಯೆಯು ಗಣನೀಯವಾಗಿ ಕಡಿಮೆಯಾಗಿದೆ.ಜನರಲ್ ಸ್ಟ್ಯಾಟಿಸ್ಟಿಕ್ಸ್ ಅಥಾರಿಟಿಯ ಪ್ರಕಾರ ಈ ಅವಧಿಯಲ್ಲಿ 7 ಲಕ್ಷಕ್ಕೂ ಅಧಿಕ ವಿದೇಶಿ ನೌಕರರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವ್ಯಕ್ತಪಡಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ