ನರಿಂಗಾನ: ಮಂಜನಾಡಿ ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಯು ಈ ಬಾರಿಯ ಪರೀಕ್ಷೆಯಲ್ಲಿ ಶೇ. ನೂರರಷ್ಟು ಫಲಿತಾಂಶವನ್ನು ದಾಖಲಿಸುವ ಮೂಲಕ ಶೈಕ್ಷಣಿಕ ಸಾಧನೆಯನ್ನು ಮುಂದುವರಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 51 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆ:
ಶಾಲೆಯ ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (Distinction) ತೇರ್ಗಡೆಯಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
- ಮಹಮ್ಮದ್ ಶಹೀರ್: ಶೇ. 96
- ಆಯಿಶತುಲ್ ರಿಫಾ: ಶೇ. 87.04
- ಅಯಿಶಾ ರಿಝಾ: ಶೇ. 87
- ಅಬ್ದುಲ್ ಬಾಸಿತ್ ಸುಲ್ತಾನ್: ಶೇ. 85
ಉಳಿದಂತೆ 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.
ಇತರ ವಿಭಾಗಗಳಲ್ಲೂ ಮಿಂಚಿನ ಸಾಧನೆ:
ಅಲ್ ಮದೀನ ಶಿಕ್ಷಣ ಸಂಸ್ಥೆಗಳ ಇತರ ವಿಭಾಗಗಳಾದ ಯತೀಂ-ಖಾನ, ದಾರುಲ್ ಮಸಾಕೀನ್, ಹಿಫ್ಲುಲ್ ಕುರ್ಆನ್ ಕಾಲೇಜು, ರಿಸಾಲ ಅಕಾಡೆಮಿ ಹಾಗೂ ಉತ್ತರ ಕರ್ನಾಟಕದ ಹನಫೀ ಕ್ಯಾಂಪಸ್ (ಶಿಮಾಲಿ ಗಾರ್ಡನ್) ವಿಭಾಗದ ವಿದ್ಯಾರ್ಥಿಗಳೂ ಕೂಡ ಶೇ. ನೂರರಷ್ಟು ಫಲಿತಾಂಶವನ್ನು ದಾಖಲಿಸಿದ್ದಾರೆ.
ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ