ರಿಯಾದ್ : ಸೌದಿ ಅರೇಬಿಯಾದ ಹುರೈಮಿಲಾ ಪ್ರಾಂತ್ಯದ ಪಾರ್ಕ್ ಒಂದರಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹುರೈಮಿಲಾದ ಪ್ರಸಿದ್ಧ ‘ಅಲ್-ಶಲಾಲ್’ ಪಾರ್ಕ್‌ಗೆ ತನ್ನ ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾಕಿಮ್ ಬಿನ್ ಅಲಿ ಅಬು ಸಕೀತಾ ಎಂಬ ಬಾಲಕನೇ ಮೃತಪಟ್ಟ ದುರ್ದೈವಿ.
ಕುಟುಂಬದ ಸದಸ್ಯರೊಂದಿಗೆ ಪಾರ್ಕ್‌ನಲ್ಲಿ ಆಟವಾಡುತ್ತಿದ್ದಾಗ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದೆ. ಪಾರ್ಕ್‌ನ ಆಟದ ಉಪಕರಣಗಳ ಸಮೀಪವಿದ್ದ ಸರಿಯಾಗಿ ಮುಚ್ಚದ ಎಲೆಕ್ಟ್ರಿಕ್ ಕೇಬಲ್‌ಗಳಿಂದ ಅಥವಾ ಹಾನಿಗೊಳಗಾದ ವೈರಿಂಗ್‌ನಿಂದ ಈ ಅನಾಹುತ ಸಂಭವಿಸಿದೆ ಎಂದು ನಂಬಲಾಗಿದೆ.
ಕೂಡಲೇ ಮಗುವಿನ ಸಹೋದರ ಆತನನ್ನು ಎಳೆದು ರಕ್ಷಿಸಲು ಪ್ರಯತ್ನಿಸಿದ್ದಾನೆ. ತಕ್ಷಣವೇ ಬಾಲಕನನ್ನು ಹುರೈಮಿಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ.
“ದೇವರ ಇಚ್ಛೆಗೆ ನಾವು ತಲೆಬಾಗುತ್ತೇವೆ, ಆದರೆ ಈ ನಷ್ಟವನ್ನು ಭರಿಸುವುದು ಅಸಾಧ್ಯ” ಎಂದು ಮಗುವಿನ ತಂದೆ ಅಲಿ ಅಬು ಸಕೀತಾ ದುಃಖ ತೋಡಿಕೊಂಡಿದ್ದಾರೆ. ಮಗನ ಅಗಲಿಕೆಯಿಂದ ತಾಯಿ ಮತ್ತು ಸಹೋದರಿಯರು ಮಾನಸಿಕವಾಗಿ ಕುಸಿದುಹೋಗಿದ್ದಾರೆ.
ಇಂತಹ ಸಾರ್ವಜನಿಕ ಉದ್ಯಾನವನಗಳಲ್ಲಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸುವಲ್ಲಿನ ವೈಫಲ್ಯವೇ ತನ್ನ ಮಗನ ಮರಣಕ್ಕೆ ಕಾರಣ ಎಂದು ಆರೋಪಿಸಿರುವ ತಂದೆ, ಇದಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ