ಬಂಟ್ವಾಳ: ಪಾಣೆಮಂಗಳೂರಿನ ಎಸ್.ಎಸ್ ಹಾಲ್ನಲ್ಲಿ ಇತ್ತೀಚೆಗೆ ನಡೆದ ಎಸ್.ವೈ.ಎಸ್ (SYS) ಬಂಟ್ವಾಳ ಝೋನ್ ವಾರ್ಷಿಕ ಕೌನ್ಸಿಲ್ ಸಭೆಯಲ್ಲಿ, ಮೇ 2ರ ಶನಿವಾರ ನಡೆಯಲಿರುವ ‘ಮಾದರಿ ಮದುವೆ ಜನಜಾಗೃತಿ ಅಭಿಯಾನ’ದ ಸಮಾರೋಪ ಸಮಾರಂಭವನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು.
ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಚಟ್ಟೆಕ್ಕಳ್ ದುಆ ನೆರವೇರಿಸಿದರು. ಝೋನ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಅಧ್ಯಕ್ಷತೆ ವಹಿಸಿದ್ದರು. ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ಝೋನ್ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಕೊಳಕೆ ವರದಿ ವಾಚಿಸಿದರೆ, ಕೋಶಾಧಿಕಾರಿ ಅಶ್ರಫ್ ಪೆರಾಳ ಲೆಕ್ಕಪತ್ರ ಮಂಡಿಸಿದರು.
ಜಿಲ್ಲಾ ಉಪಾಧ್ಯಕ್ಷ ಹಾಫಿಳ್ ಯಾಕೂಬ್ ಸಅದಿ ನಾವೂರು ವೀಕ್ಷಕರಾಗಿ ಆಗಮಿಸಿ ತರಗತಿ ನಡೆಸಿಕೊಟ್ಟರು. ರಾಜ್ಯ ಉಪಾಧ್ಯಕ್ಷ ಇಬ್ರಾಹಿಂ ಖಲೀಲ್ ಮಾಲಿಕಿ ಶುಭಹಾರೈಸಿ ಮಾತನಾಡಿದರು.
ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ ಉಸ್ತಾದರ ಸಾನಿಧ್ಯದಲ್ಲಿ ಮೇ 2ರ ಶನಿವಾರ ಸಂಜೆ 4 ಗಂಟೆಗೆ ಪುತ್ತೂರು ದರ್ಭೆಯಿಂದ ಕಿಲ್ಲೆ ಮೈದಾನದವರೆಗೆ ಮಾದರಿ ಮದುವೆ ಜನಜಾಗೃತಿ ಜಾಥಾ ನಡೆಯಲಿದ್ದು, ಬಳಿಕ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಈ ಅಭಿಯಾನದಲ್ಲಿ ಇಸಾಬಾ ಸದಸ್ಯರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಇದೇ ಸಂದರ್ಭದಲ್ಲಿ ವಿನಂತಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಜಿಲ್ಲಾ ನಾಯಕರಾದ ರಶೀದ್ ಹಾಜಿ ವಗ್ಗ, ಅಶ್ರಫ್ ನಾರ್ಶ ಹಾಗೂ ಝೋನ್ ಪ್ರಮುಖರು ಉಪಸ್ಥಿತರಿದ್ದರು. ಅಲ್ತಾಫ್ ಕೊಳಕೆ ಸ್ವಾಗತಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ