ಪುತ್ತೂರು: ಎಸ್ ವೈ ಎಸ್ (SYS) ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡಿರುವ ‘ಮಾದರಿ ಮದುವೆ’ ಅಭಿಯಾನದ ಸಮಾರೋಪ ಸಮಾವೇಶವು ಮೇ 2ರಂದು ಪುತ್ತೂರಿನಲ್ಲಿ ಅತ್ಯಂತ ವೈಭವದೊಂದಿಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ (SSF) ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಮಾಜದಲ್ಲಿ ಸರಳ ಹಾಗೂ ಮಾದರಿ ಮದುವೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂದು ಸಂಜೆ 4:00 ಗಂಟೆಗೆ ಪುತ್ತೂರಿನ ದರ್ಬೆ ವೃತ್ತದಿಂದ ಕಿಲ್ಲೆ ಮೈದಾನದವರೆಗೆ ಭವ್ಯ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಐತಿಹಾಸಿಕ ಜಾಥಾದಲ್ಲಿ ಸುನ್ನಿ ಸಂಘ ಕುಟುಂಬದ ವಿವಿಧ ಸ್ತರದ ನಾಯಕರು ಹಾಗೂ ಸಾವಿರಾರು ಸಂಖ್ಯೆಯ ಶಿಸ್ತುಬದ್ಧ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ನಂತರ ಸಂಜೆ 6:00 ಗಂಟೆಗೆ ಕಿಲ್ಲೆ ಮೈದಾನದಲ್ಲಿ ಸಮಾರೋಪ ಸಮ್ಮೇಳನ ಜರುಗಲಿದ್ದು, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್, ಕರ್ನಾಟಕ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಹಾಗೂ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಅವರು ಮಾದರಿ ಮದುವೆ ವಿಷಯದ ಕುರಿತು ವಿಶೇಷ ಪ್ರವಚನ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ-ಉಮರಾ ನೇತಾರರು, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದ ಪ್ರಮುಖ ಗಣ್ಯರು ಉಪಸ್ಥಿತರಿರಲಿದ್ದಾರೆ.
ಜಿಲ್ಲಾ ವ್ಯಾಪ್ತಿಯ ಸುನ್ನಿ ಸಂಘ ಕುಟುಂಬದ ಎಲ್ಲಾ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು SSF ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ವಿನಂತಿಸಿದೆ.

















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ