ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಜಮಿಯ್ಯತುಲ್ ಉಲಮಾ ಮುಶಾವರಕ್ಕೆ ಪ್ರಸಿದ್ಧ ಸಂಘಟಕ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನಾ ಎನ್.ಕೆ.ಎಂ. ಶಾಫಿ ಸಅದಿ ಅವರನ್ನು ಸದಸ್ಯರಾಗಿ ನೇಮಕಗೊಳಿಸಲಾಗಿದೆ.
ಪುತ್ತೂರಿನಲ್ಲಿ ನಡೆದ ‘ಮಾದರಿ ಮದುವೆ ಅಭಿಯಾನ’ ಎಸ್.ವೈ.ಎಸ್. ರಾಜ್ಯ ಸಮಾವೇಶದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಈ ಮಹತ್ವದ ಘೋಷಣೆ ಮಾಡಿದರು.
ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎ.ಪಿ. ಉಸ್ತಾದ್, ರಾಜ್ಯದಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸುವ ಮತ್ತು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸಮುದಾಯದ ಸಂಸ್ಥೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಾಫಿ ಸಅದಿಯವರ ಅನುಭವ ಮತ್ತು ಸರ್ಕಾರದೊಂದಿಗಿನ ಸಂಪರ್ಕವು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯಾದ್ಯಂತ ಜಮ್ಇಯ್ಯತುಲ್ ಉಲಮಾವನ್ನು ಮತ್ತಷ್ಟು ಕ್ರಿಯಾಶೀಲಗೊಳಿಸಲು ಮತ್ತು ಸುನ್ನೀ ಸಂಘಟನೆಗಳ ಆಸ್ಥಾನದ ಪೂರ್ಣೀಕರಣಕ್ಕಾಗಿ ನಾಲ್ವರು ಉಲಮಾಗಳನ್ನೊಳಗೊಂಡ ಉಪ ಸಮಿತಿಯನ್ನೂ ಇದೇ ಸಂದರ್ಭದಲ್ಲಿ ರಚಿಸಲಾಗಿದೆ. ಅಸೌಖ್ಯದ ನಡುವೆಯೂ ಸಮಾವೇಶಕ್ಕೆ ಆಗಮಿಸಿದ ಸುಲ್ತಾನುಲ್ ಉಲಮಾ ಅವರು, ಸಂಘಟನೆಯ ಈ ನೂತನ ತೀರ್ಮಾನಗಳು ರಾಜ್ಯದಲ್ಲಿ ಮಹತ್ತರ ಬದಲಾವಣೆಗೆ ನಾಂದಿಯಾಗಲಿವೆ ಎಂಬ ಸಂದೇಶ ನೀಡಿದರು.















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ