ಉಚ್ಚಿಲ: ಉಡುಪಿ ಜಿಲ್ಲೆಯ ಉಚ್ಚಿಲ ಸಮೀಪದ ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ದೀನಿ ಶಿಕ್ಷಣ ಸಂಸ್ಥೆ ದಾರುಲ್ ಅಮಾನ್ ಎಜ್ಯುಕೇಶನಲ್ ಅಕಾಡೆಮಿಯ ಆಶ್ರಯದಲ್ಲಿ ಏರ್ವಾಡಿ ಶುಹದಾ ನೇರ್ಚೆ, ಬೃಹತ್ ಸ್ವಲಾತ್ ಮಜ್ಲಿಸ್ ಹಾಗೂ ಮಹಿಳಾ ಶರೀಅತ್ ಪದವಿ ಪ್ರದಾನ ಸಮಾರಂಭವು ಮೇ 07, 2026ರ ಗುರುವಾರ ನಡೆಯಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ. ಎ. ಅಬ್ದುರ್ರಹ್ಮಾನ್ ರಝ್ವಿ ಅಲ್ ಫುರ್ಖಾನಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸ್ಥೆಯ ಆವರಣದಲ್ಲಿ ಅಂದು ಬೆಳಿಗ್ಗೆ 9:30 ರಿಂದ ಸಂಜೆ 6:00 ಗಂಟೆಯವರೆಗೆ ಸರಣಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಬೆಳಿಗ್ಗೆ 9:30ಕ್ಕೆ ಶಾದುಲಿಯಾ ಮಜ್ಲಿಸ್ ಮೂಲಕ ಚಾಲನೆ ನೀಡಲಾಗುವುದು. ಪೂರ್ವಾಹ್ನ 11:30ಕ್ಕೆ ಏರ್ವಾಡಿ ಮಜ್ಲಿಸ್, ಮಧ್ಯಾಹ್ನ 2:00 ಗಂಟೆಗೆ ಮಹನೀಯರ ಅನುಸ್ಮರಣಾ ಭಾಷಣ ಹಾಗೂ ಸಂಜೆ 4:00 ಗಂಟೆಗೆ ಆಧ್ಯಾತ್ಮಿಕ ಚೈತನ್ಯ ನೀಡುವ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಇದೇ ಸುಸಂದರ್ಭದಲ್ಲಿ ವಿದ್ಯಾಭ್ಯಾಸ ಪೂರೈಸಿದ ವಿದ್ಯಾರ್ಥಿನಿಯರಿಗೆ ಮಹಿಳಾ ಶರೀಅತ್ ಪದವಿ ಪ್ರದಾನ ಮಾಡಲಾಗುವುದು.
ಈ ಐತಿಹಾಸಿಕ ಸಮಾವೇಶದಲ್ಲಿ ಅಸ್ಸಯ್ಯಿದ್ ಬಾಫಖಿ ತಂಙಳ್ ಕೊಯಿಲಾಂಡಿ, ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್, ತಾನಲ್ಲೂರು ಅಬ್ದುಲ್ಲಾ ಉಸ್ತಾದ್, ಮೌಲಾನಾ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್, ಉಸ್ತಾದ್ ಮಜೀದ್ ಫೈಝಿ ಪೊಯ್ಯತ್ತಬೈಲು, ಅಲ್ಹಾಜ್ ಉಸ್ತಾದ್ ಸಲೀಂ ಮದನಿ, ಬಹು| ಶರೀಫ್ ಸಅದಿ ಕಿಲ್ಲೂರು ಸೇರಿದಂತೆ ನಾಡಿನ ಖ್ಯಾತ ಉಲಮಾ-ಉಮರಾ ನಾಯಕರು, ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಧರ್ಮಾನುರಾಗಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ