ಮಕ್ಕತುಲ್ ಮುಕರ್ರಮಃ : ಮಕ್ಕಾದಲ್ಲಿ ನಕಲಿ ಇಖಾಮಾ (ರೆಸಿಡೆನ್ಸಿ ಪರ್ಮಿಟ್) ಮತ್ತು ಹಜ್ ಸಂಬಂಧಿತ ದಾಖಲೆಗಳನ್ನು ತಯಾರಿಸುತ್ತಿದ್ದ ಬೃಹತ್ ಜಾಲವನ್ನು ಮಕ್ಕಾ ಪೊಲೀಸರು ಅವರ ಅಡಗುತಾಣದ ಮೇಲೆ ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ.
ಆರೋಪಿಗಳ ಕೇಂದ್ರದ ಮೇಲೆ ನಡೆದ ದಾಳಿ ಮತ್ತು ಅವರನ್ನು ಬಂಧಿಸುವ ದೃಶ್ಯಗಳನ್ನು ಸೌದಿ ಅರೇಬಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯವು ಅಧಿಕೃತವಾಗಿ ಬಿಡುಗಡೆ ಮಾಡಿದೆ. ವೀಡಿಯೋ
ಖಚಿತ ಮಾಹಿತಿಯ ಮೇರೆಗೆ ಆರೋಪಿಗಳು ತಂಗಿದ್ದ ಫ್ಲಾಟ್ ಮೇಲೆ ಪೊಲೀಸರು ನಡೆಸಿದ ಹಠಾತ್ ದಾಳಿಯಲ್ಲಿ 18 ಜನರಿದ್ದ ಕ್ರಿಮಿನಲ್ ತಂಡ ಸಿಕ್ಕಿಬಿದ್ದಿದೆ. ಈ ತಂಡವು ನಕಲಿ ಇಖಾಮಾಗಳ ಜೊತೆಗೆ, ಹಜ್ ಯಾತ್ರಿಕರಿಗಾಗಿ ಸರ್ಕಾರ ಜಾರಿಗೆ ತಂದಿರುವ ‘ನುಸುಕ್’ (Nusuk) ಕಾರ್ಡ್ಗಳು ಮತ್ತು ಗುರುತಿನ ಬ್ರೇಸ್ಲೆಟ್ಗಳನ್ನು ಕಾನೂನುಬಾಹಿರವಾಗಿ ತಯಾರಿಸುತ್ತಿತ್ತು.
ಬಂಧಿತ 18 ಮಂದಿಯೂ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಮೂಲದವರಾಗಿದ್ದಾರೆ.
ಬಂಧಿತರ ವಿರುದ್ಧ ಪ್ರಾಥಮಿಕ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚಿನ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಗಳಿಗಾಗಿ ಅವರನ್ನು ಸಾರ್ವಜನಿಕ ಪ್ರಾಸಿಕ್ಯೂಷನ್ಗೆ ಹಸ್ತಾಂತರಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ