ರಿಯಾದ್: ಸೌದಿ ಅರೇಬಿಯಾದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಕೋಝಿಕ್ಕೋಡ್ ಮೂಲದ ಅಬ್ದುಲ್ ರಹೀಮ್ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ರಹೀಮ್ ಅವರ ಬಿಡುಗಡೆಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ತಲುಪಿವೆ ಎಂದು ರಿಯಾದ್ನಲ್ಲಿರುವ ರಹೀಮ್ ಕಾನೂನು ಸಹಾಯ ಸಮಿತಿ ತಿಳಿಸಿದೆ.
ರಹೀಮ್ ಅವರ ಬಿಡುಗಡೆಗೆ ಅಗತ್ಯವಿರುವ 34 ಕೋಟಿ ರೂಪಾಯಿಗಳ ‘ಬ್ಲಡ್ ಮನಿ’ (ಪರಿಹಾರ ಧನ) ಅನ್ನು ಈಗಾಗಲೇ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ. ಇದರ ಬೆನ್ನಲ್ಲೇ ಮೃತ ಬಾಲಕನ ಕುಟುಂಬವು ಕ್ಷಮಾದಾನ ಪತ್ರಕ್ಕೆ ಸಹಿ ಹಾಕಿದೆ. ಈ ದಾಖಲೆಗಳನ್ನು ನ್ಯಾಯಾಲಯವು ಅಂಗೀಕರಿಸಿದ್ದು, ಮರಣದಂಡನೆ ಶಿಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ.
ಪ್ರಸ್ತುತ, ಬಿಡುಗಡೆಗೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ನಡೆಯುತ್ತಿವೆ. ರಹೀಮ್ ಅವರ ಬಿಡುಗಡೆ ಆದೇಶಕ್ಕೆ ಸೌದಿ ರಾಜಮನೆತನದ ಅನುಮೋದನೆ ದೊರೆತ ತಕ್ಷಣ ಅವರು ಜೈಲಿನಿಂದ ಹೊರಬರಲಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಸಮಿತಿಯ ಪದಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ 18 ವರ್ಷಗಳಿಂದ ಅಬ್ದುಲ್ ರಹೀಮ್ ಜೈಲು ವಾಸ ಅನುಭವಿಸುತ್ತಿದ್ದಾರೆ. ಕನ್ನಡಿಗರು ಸೇರಿದಂತೆ ಪ್ರಪಂಚದಾದ್ಯಂತ ಇರುವ ಮಲಯಾಳಿಗಳು ಅತೀ ಕಡಿಮೆ ಸಮಯದಲ್ಲಿ ಈ ಬೃಹತ್ ಮೊತ್ತವನ್ನು ಕ್ರೋಢೀಕರಿಸುವ ಮೂಲಕ ರಹೀಮ್ ಅವರ ಜೀವ ಉಳಿಸಲು ನೆರವಾಗಿದ್ದರು. ಈ ಪ್ರಕರಣವು ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಗಮನ ಸೆಳೆದಿತ್ತು.
ಶೀಘ್ರದಲ್ಲೇ ರಹೀಮ್ ತಮ್ಮ ತಾಯ್ನಾಡಿಗೆ ಮರಳಲಿದ್ದು, ಅವರ ಸ್ವಾಗತಕ್ಕಾಗಿ ಕುಟುಂಬಸ್ಥರು ಮತ್ತು ನಾಡಿನ ಜನರು ಕಾತರದಿಂದ ಕಾಯುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ