ರಿಯಾದ್: ಸೌದಿ ಅರೇಬಿಯಾದ ನಜ್ರಾನ್ನಲ್ಲಿ ವಾಸಸ್ಥಳವನ್ನು ಕೇಂದ್ರೀಕರಿಸಿ ಅನೈತಿಕ ಚಟುವಟಿಕೆಗಳಲ್ಲಿ (ವೇಶ್ಯಾವಾಟಿಕೆ) ತೊಡಗಿದ್ದ 12 ಮಂದಿ ವಿದೇಶಿ ನಿವಾಸಿಗಳನ್ನು (ವಲಸಿಗರನ್ನು) ಪೊಲೀಸರು ಬಂಧಿಸಿದ್ದಾರೆ. ಕಮ್ಯುನಿಟಿ ಸೆಕ್ಯುರಿಟಿ ವಿಭಾಗ ಮತ್ತು ಮಾನವ ಕಳ್ಳಸಾಗಣೆ ವಿರೋಧಿ ನಿರ್ದೇಶನಾಲಯದ ಸಹಯೋಗದೊಂದಿಗೆ ನಜ್ರಾನ್ ಪೊಲೀಸರು ಜಂಟಿಯಾಗಿ ನಡೆಸಿದ ನಿಖರ ಕಾರ್ಯಾಚರಣೆಯ ಪರಿಣಾಮವಾಗಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಒಂದು ವಸತಿ ಅಪಾರ್ಟ್ಮೆಂಟ್ ಅನ್ನು ಕೇಂದ್ರೀಕರಿಸಿ ಇವರ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಸಾರ್ವಜನಿಕ ಭದ್ರತಾ ನಿರ್ದೇಶನಾಲಯವು ಸ್ಪಷ್ಟಪಡಿಸಿದೆ.
ಬಂಧಿತ ಆರೋಪಿಗಳ ವಿರುದ್ಧ ಪೊಲೀಸರು ಈಗಾಗಲೇ ಪ್ರಾಥಮಿಕ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ. ಮುಂದಿನ ತನಿಖೆ ಹಾಗೂ ವಿಚಾರಣಾ ಪ್ರಕ್ರಿಯೆಗಳಿಗಾಗಿ ಇವರನ್ನು ಪಬ್ಲಿಕ್ ಪ್ರಾಸಿಕ್ಯೂಷನ್ಗೆ ಹಸ್ತಾಂತರಿಸಲಾಗಿದೆ. ದೇಶದ ಕಾನೂನುಗಳನ್ನು ಮತ್ತು ಸಾಮಾಜಿಕ ಭದ್ರತೆಯನ್ನು ಉಲ್ಲಂಘಿಸುವ ಇಂತಹ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕಣ್ಗಾವಲು ಮುಂದುವರಿಯಲಿದೆ ಎಂದು ಭದ್ರತಾ ವಿಭಾಗವು ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?