ದುಬೈ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೈಬಿಟ್ಟ ಸ್ಥಿತಿಯಲ್ಲಿ ಪತ್ತೆಯಾದ ಸೂಟ್ಕೇಸ್ನಿಂದ ಹಾವುಗಳು ಮತ್ತು ಚೇಳುಗಳು ಸೇರಿದಂತೆ ಇನ್ನೂರಕ್ಕೂ ಹೆಚ್ಚು ವನ್ಯಜೀವಿಗಳನ್ನು ದುಬೈ ಕಸ್ಟಮ್ಸ್ ವಶಪಡಿಸಿಕೊಂಡಿದೆ.
ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಮಾಲೀಕರಿಲ್ಲದ ಸೂಟ್ಕೇಸ್ ಒಂದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಬ್ಯಾಗ್ನ ಹೊರಗೆ ಪ್ರಯಾಣಿಕರ ವಿವರಗಳಾಗಲಿ ಅಥವಾ ವಿಮಾನದ ಕುರಿತಾದ ಯಾವುದೇ ಮಾಹಿತಿಯಾಗಲಿ ಇಲ್ಲದಿರುವುದು ಅಧಿಕಾರಿಗಳಲ್ಲಿ ಅನುಮಾನ ಮೂಡಿಸಿದೆ. ತದನಂತರ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸಿ ನಡೆಸಿದ ವಿವರವಾದ ತಪಾಸಣೆಯಲ್ಲಿ ಜೀವಂತ ವನ್ಯಜೀವಿಗಳು ಪತ್ತೆಯಾಗಿವೆ.
ಸೂಟ್ಕೇಸ್ನ ಒಳಗಿದ್ದ ಸಣ್ಣ ಸಣ್ಣ ಪೆಟ್ಟಿಗೆಗಳಲ್ಲಿ ಈ ಜೀವಿಗಳನ್ನು ಇಡಲಾಗಿತ್ತು. ಬ್ಯಾಗ್ನಿಂದ 129 ಹಲ್ಲಿಗಳು, 36 ಚೇಳುಗಳು, 50 ಕಪ್ಪೆಗಳು ಹಾಗೂ ಎಂಟು ವಿಷಪೂರಿತ ಹಾವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 223 ಜೀವಿಗಳು ಬ್ಯಾಗ್ನಲ್ಲಿದ್ದವು. ವನ್ಯಜೀವಿಗಳು ಪತ್ತೆಯಾದ ತಕ್ಷಣ ಅಧಿಕಾರಿಗಳು ಪರಿಸರ ಮತ್ತು ವನ್ಯಜೀವಿ ಸಚಿವಾಲಯಕ್ಕೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಮಾನ ನಿಲ್ದಾಣದ ಸಿಸಿಟಿವಿ ಕ್ಯಾಮೆರಾಗಳನ್ನು ಆಧರಿಸಿ ಬ್ಯಾಗ್ ಬಿಟ್ಟು ಹೋಗಿರುವ ಪ್ರಯಾಣಿಕನನ್ನು ಪತ್ತೆಹಚ್ಚಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ವನ್ಯಜೀವಿಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುವುದು ದುಬೈನಲ್ಲಿ ಗಂಭೀರ ಅಪರಾಧವಾಗಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದುಬೈ ಕಸ್ಟಮ್ಸ್ನ ಪ್ಯಾಸೆಂಜರ್ ವಿಭಾಗದ ನಿರ್ದೇಶಕ ಖಾಲಿದ್ ಅಹಮದ್ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ