ರಿಯಾದ್: ದೇಶದ ವಿವಿಧ ಭಾಗಗಳಲ್ಲಿ ಬೇಸಿಗೆಯ ತಾಪಮಾನವು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ ಡೈರೆಕ್ಟರೇಟ್ ಆಫ್ ಸಿವಿಲ್ ಡಿಫೆನ್ಸ್ ವಾಹನ ಮಾಲೀಕರಿಗೆ ತುರ್ತು ಸುರಕ್ಷತಾ ಎಚ್ಚರಿಕೆಯನ್ನು ನೀಡಿದೆ. ವಾಹನಗಳ ಒಳಗೆ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಅಜಾಗರೂಕತೆಯಿಂದ ಇಡುವುದರಿಂದ ಭಾರಿ ಅಗ್ನಿ ಅವಘಡಗಳು ಸಂಭವಿಸಬಹುದು. ಇದು ಜೀವ ಮತ್ತು ಆಸ್ತಿಗೆ ತೀವ್ರ ಬೆದರಿಕೆಯಾಗಿದೆ ಎಂದು ಸಿವಿಲ್ ಡಿಫೆನ್ಸ್ ನೆನಪಿಸಿದೆ.
ಪೋರ್ಟಬಲ್ ಚಾರ್ಜರ್ಗಳು, ಫೋನ್ ಬ್ಯಾಟರಿಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳು ಅಪಘಾತಗಳಿಗೆ ಕಾರಣವಾಗಬಹುದು. ಲೈಟರ್ಗಳು, ಸಣ್ಣ ಗ್ಯಾಸ್ ಸಿಲಿಂಡರ್ಗಳು/ಕ್ಯಾನಿಸ್ಟರ್ಗಳಂತಹ ಬೆಂಕಿ ಅವಘಡಕ್ಕೆ ಕಾರಣವಾಗುವ ವಸ್ತುಗಳನ್ನು ವಾಹನಗಳ ಒಳಗೆ ಇಡಬಾರದು. ಪರ್ಫ್ಯೂಮ್ಗಳು ಮತ್ತು ಲಿಕ್ವಿಡ್ ಹ್ಯಾಂಡ್ ಸ್ಯಾನಿಟೈಸರ್ಗಳು ಸಹ ಅಪಾಯವನ್ನು ಉಂಟುಮಾಡುವಂಥವುಗಳಾಗಿವೆ.
ದೀರ್ಘಕಾಲದವರೆಗೆ ತೀವ್ರವಾದ ಶಾಖಕ್ಕೆ ಒಳಗಾಗುವುದರಿಂದ ಇವುಗಳು ಸ್ಫೋಟಗೊಳ್ಳುವ ಅಥವಾ ಹಠಾತ್ ಆಗಿ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆಯಿದೆ. ಅಪಘಾತಗಳನ್ನು ಗರಿಷ್ಠ ಮಟ್ಟದಲ್ಲಿ ಕಡಿಮೆ ಮಾಡಲು ಸಾರ್ವಜನಿಕರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಸಿವಿಲ್ ಡಿಫೆನ್ಸ್ ಒತ್ತಿ ಹೇಳಿದೆ.
ಅಧಿಕೃತ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ. ಯಾವುದೇ ರೀತಿಯ ತುರ್ತು ಪರಿಸ್ಥಿತಿ ಅಥವಾ ಅಪಘಾತ ಸಂಭವಿಸಿದಲ್ಲಿ, ಸಹಾಯಕ್ಕಾಗಿ ತುರ್ತು ಸಂಖ್ಯೆಗಳನ್ನು ಸಂಪರ್ಕಿಸಬಹುದು. ಮಕ್ಕಾ, ಮದೀನಾ, ರಿಯಾದ್ ಮತ್ತು ಪೂರ್ವ ಪ್ರಾಂತ್ಯದಲ್ಲಿರುವವರು 911 ಸಂಖ್ಯೆಗೆ ಮತ್ತು ದೇಶದ ಇತರ ಪ್ರದೇಶಗಳಲ್ಲಿರುವವರು 998 ಎಂಬ ತುರ್ತು ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬೇಕಾಗಿದೆ.















ಇನ್ನಷ್ಟು ಸುದ್ದಿಗಳು
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು
ಡೆಲಿವರಿ ಡ್ರೈವರ್ಗಳಿಗೆ ಹವಾನಿಯಂತ್ರಿತ ವಿಶ್ರಾಂತಿ ಕೇಂದ್ರಗಳು – ದುಬೈ ಆರ್ಟಿಎ ಕೊಡುಗೆ