ರಿಯಾದ್: ಸೌದಿ ಅರೇಬಿಯಾದಲ್ಲಿ ನಿಷೇಧಿತ ಮಾದಕ ವಸ್ತುವಾದ ‘ಖಾತ್’ (Khat) ಮಾರಾಟ ಮಾಡುತ್ತಿದ್ದ ಭಾರತೀಯ ಪ್ರಜೆಯೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿವೆ. ದಕ್ಷಿಣ ಪ್ರಾಂತ್ಯದ ಅಸೀರ್‌ನ ಅಲ್ ಫರ್ಷಾ ಗವರ್ನರೇಟ್‌ನಲ್ಲಿ 58 ಕಿಲೋಗ್ರಾಂ ಖಾತ್ ಮಾದಕ ವಸ್ತುವಿನೊಂದಿಗೆ ಅನಿವಾಸಿ ಭಾರತೀಯನನ್ನು ಅಫ್ವಾಜ್ ಸೆಕ್ಯುರಿಟಿ ಪೆಟ್ರೋಲಿಂಗ್ ವಿಭಾಗವು ಬಂಧಿಸಿದೆ.
ಆರೋಪಿ ಸದ್ಯ ಭದ್ರತಾ ಪಡೆಗಳ ವಶದಲ್ಲಿದ್ದಾನೆ. ಆತನ ವಿರುದ್ಧದ ಪ್ರಾಥಮಿಕ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಮುಂದಿನ ತನಿಖೆಗಾಗಿ ಪ್ರಕರಣವನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಅಧಿಕೃತವಾಗಿ ತಿಳಿಸಿದ್ದಾರೆ.
ದೇಶದಲ್ಲಿ ಮಾದಕ ವಸ್ತುಗಳ ಸಾಗಣೆ ಅಥವಾ ಮಾರಾಟ ಕಂಡುಬಂದಲ್ಲಿ ಸ್ವದೇಶಿಗರು ಮತ್ತು ವಿದೇಶಿಗರು ಸಮಾನವಾಗಿ ಜಾಗರೂಕರಾಗಿರಬೇಕು ಮತ್ತು ತಕ್ಷಣವೇ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮಾಹಿತಿ ನೀಡುವವರ ವಿವರಗಳನ್ನು ಸಂಪೂರ್ಣವಾಗಿ ರಹಸ್ಯವಾಗಿಡಲಾಗುವುದು ಎಂದು ಭದ್ರತಾ ವಿಭಾಗ ಸ್ಪಷ್ಟಪಡಿಸಿದೆ.
ಮಾದಕ ವಸ್ತು ವಿರೋಧಿ ಹೋರಾಟದ ಭಾಗವಾಗಿ, ಸಾರ್ವಜನಿಕರು ಮಕ್ಕಾ, ರಿಯಾದ್ ಮತ್ತು ಪೂರ್ವ ಪ್ರಾಂತ್ಯಗಳಲ್ಲಿ 911 ಸಂಖ್ಯೆಗೆ ಹಾಗೂ ದೇಶದ ಇತರ ಭಾಗಗಳಲ್ಲಿರುವವರು 999 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು. ಇದಲ್ಲದೆ, ಜನರಲ್ ಡೈರೆಕ್ಟರೇಟ್ ಆಫ್ ನಾರ್ಕೋಟಿಕ್ಸ್ ಕಂಟ್ರೋಲ್‌ಗೆ ನೇರವಾಗಿ ಮಾಹಿತಿ ನೀಡಲು 995 ಸಂಖ್ಯೆಯನ್ನು ಸಹ ಬಳಸಬಹುದಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ