ದೋಹಾ:** ಖತಾರ್ನ ರಾಸ್ ಲಫ್ಫಾನ್ ಇಂಡಸ್ಟ್ರಿಯಲ್ ಸಿಟಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾರತೀಯರು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. 66 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಗೃಹ ಸಚಿವಾಲಯವು ಖಚಿತಪಡಿಸಿದೆ. ಅಪಘಾತದ ನಂತರ 18 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ವ್ಯಾಪಕ ಹುಡುಕಾಟ ಪ್ರಗತಿಯಲ್ಲಿದೆ ಎಂದು ಸಚಿವಾಲಯ ತಿಳಿಸಿದೆ.
ಭಾನುವಾರ(ನಿನ್ನೆ) ರಾತ್ರಿ ಸುಮಾರು 10.45 ರ ವೇಳೆಗೆ ರಾಸ್ ಲಫ್ಫಾನ್ ಇಂಡಸ್ಟ್ರಿಯಲ್ ಸಿಟಿಯ ಕಾರ್ಖಾನೆಯೊಂದರಲ್ಲಿ ಭಾರಿ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಉಂಟಾದ ತಾಂತ್ರಿಕ ದೋಷವೇ ಈ ಅಪಘಾತಕ್ಕೆ ಕಾರಣ ಎಂದು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುವಂತಹ ಯಾವುದೇ ರೀತಿಯ ಅನಿಲ ಸೋರಿಕೆ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಖತಾರ್ ಎನರ್ಜಿಯ ಪ್ರಾದೇಶಿಕ ಗ್ಯಾಸ್ ಅಗತ್ಯಗಳಿಗಾಗಿ ಕಾರ್ಯನಿರ್ವಹಿಸುವ ‘ಬರ್ಜಾನ್ ಗ್ಯಾಸ್ ಪ್ಲಾಂಟ್’ನಲ್ಲಿ ಈ ಅಪಘಾತ ನಡೆದಿದೆ. ಪ್ಲಾಂಟ್ನ ಕಾರ್ಯಾಚರಣೆಯನ್ನು ಪುನರಾರಂಭಿಸುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿ ಪ್ಲಾಂಟ್ನಲ್ಲಿನ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿವೆ ಎಂದು ಖತಾರ್ ಎನರ್ಜಿ ಸ್ಪಷ್ಟಪಡಿಸಿದೆ. ಬೆಂಕಿ ನಂದಿಸಿದ ನಂತರ ಲಖ್ವಿಯಾ ಖತಾರ್ ಇಂಟರ್ನ್ಯಾಷನಲ್ ಸೆರ್ಚ್ ಆಂಡ್ ರೆಸ್ಕ್ಯೂ ಗ್ರೂಪ್ ಮತ್ತು ಸಿವಿಲ್ ಡಿಫೆನ್ಸ್ ಜಂಟಿಯಾಗಿ ಹುಡುಕಾಟ ನಡೆಸುತ್ತಿವೆ.
ಆಂತರಿಕ ಭದ್ರತಾ ಪಡೆಯ ಅಡಿಯಲ್ಲಿ ಬರುವ ‘ಖತಾರಿ ಇಂಟರ್ನ್ಯಾಷನಲ್ ಸೆರ್ಚ್ ಆಂಡ್ ರೆಸ್ಕ್ಯೂ ಗ್ರೂಪ್’ ಮತ್ತು ಸಿವಿಲ್ ಡಿಫೆನ್ಸ್ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ಸಂಯೋಜಿಸುತ್ತಿವೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ