ಮಕ್ಕಾ: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಇದರ ಮಕ್ಕಾ ವಲಯದ ಅಧೀನಕ್ಕೊಳಪಟ್ಟ ಮಕ್ಕತುಲ್ ಮುಕರ್ರಮ ಘಟಕದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕಾಕ್ಕಿಯ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಜರಗಿತು.
ದಿನಾಂಕ 25, ಜೂನ್ 2026ರ ಗುರುವಾರ ರಾತ್ರಿ 10 ಗಂಟೆಗೆ ಸರಿಯಾಗಿ ಆರಂಭಗೊಂಡ ಈ ಮಹಾಸಭೆಯ ಘನ ಅಧ್ಯಕ್ಷತೆಯನ್ನು ಡಿಕೆಯಸ್ಸಿ ಕೇಂದ್ರ ಆರ್ಗನೈಝರ್ ಉಸ್ತಾದ್ ಅಬ್ದುರ್ರಶೀದ್ ಸಅದಿ ಯವರು ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯ ಬೆಳವಣಿಗೆಯನ್ನು ಶ್ಲಾಘಿಸಿ ದುಆ ನೆರವೇರಿಸಿದರು.
ಮಕ್ಕತುಲ್ ಮುಕರ್ರಮ ಝೋನ್ ಸಂವಹಣಾ ಕಾರ್ಯದರ್ಶಿ ಇಬ್ರಾಹೀಂ ಕಣ್ಣಂಗಾರ್ ಅವರು ಸಭೆಗೆ ಆಗಮಿಸಿದ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ತದನಂತರ ಕಳೆದ ಸಾಲಿನ ವಾರ್ಷಿಕ ವರದಿ ಮತ್ತು ಪ್ರವರ್ತನಾ ವರದಿಯನ್ನು ಅನ್ಸಾರ್ ಉಳ್ಳಾಲ ಅವರು ಸಭೆಯ ಮುಂದಿಟ್ಟು ಮಂಡಿಸಿದರು.
ನೂತನ ಪದಾಧಿಕಾರಿಗಳ ನೇಮಕ
ಸಭೆಯಲ್ಲಿ ಮುಂಬರುವ ಸಾಲಿಗಾಗಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸರ್ವಾನುಮತದಿಂದ ಈ ಕೆಳಗಿನವರನ್ನು ಪ್ರಮುಖ ಜವಾಬ್ದಾರಿಗಳಿಗೆ ಆರಿಸಲಾಯಿತು:
- ಅಧ್ಯಕ್ಷರು: ಶಂಸುದ್ದೀನ್ ಪಾಲಕ್ಕಾಡ್
- ಪ್ರಧಾನ ಕಾರ್ಯದರ್ಶಿ: ಅಬ್ದುಲ್ ಖಾದರ್ ರಶೀಖ್ ಕೈಕಂಬ
- ಹಣಕಾಸು ಕಾರ್ಯದರ್ಶಿ: ಮೊಯಿದಿನ್ ಖಾದರ್ ಕಾಂಜರಿಕಟ್ಟೆ
ಇದರೊಂದಿಗೆ ಘಟಕದ ಮುಂದಿನ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಮತ್ತು ಸಂಘಟನೆಯನ್ನು ಬಲಪಡಿಸಲು 12 ಮಂದಿ ಸಕ್ರಿಯ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.
ಸಭೆಯ ಕೊನೆಯಲ್ಲಿ ಮೂಸಾ ಹಾಜಿ ಕಿನ್ಯ ಅವರು ಧನ್ಯವಾದ ಸಮರ್ಪಿಸಿದರು. ಮಹಾಸಭೆಯಲ್ಲಿ ಘಟಕದ ಪ್ರಮುಖರು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ