ಜಿದ್ದಾ: ಅಪರಿಚಿತ ಮೂಲಗಳಿಂದ ಬರುವ ಸುದ್ದಿಗಳು ಮತ್ತು ವಿಡಿಯೋಗಳನ್ನು ಹಂಚಿಕೊಳ್ಳದಂತೆ (ಶೇರ್ ಮಾಡದಂತೆ) ಸೌದಿ ಆಂತರಿಕ ಸಚಿವಾಲಯವು ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಕಲಿ ಸುದ್ದಿಗಳು ಗೊಂದಲ ಮತ್ತು ಭದ್ರತಾ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಎಚ್ಚರಿಸಲಾಗಿದೆ. ಅಧಿಕೃತ ಸುದ್ದಿ ವಾಹಿನಿಗಳ ಮೂಲಕ ಹೊರಬರುವ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಸಚಿವಾಲಯ ತಿಳಿಸಿದೆ.
ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ಸುದ್ದಿ ಮೂಲಗಳನ್ನು ಮಾತ್ರ ಅವಲಂಬಿಸಬೇಕು. ಸಚಿವಾಲಯದ ಅಧಿಕೃತ ವೆಬ್ಸೈಟ್, ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಸೌದಿ ಪ್ರೆಸ್ ಏಜೆನ್ಸಿ (SPA) ಮೂಲಕ ಹೊರಬರುವ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ನಿಖರವಲ್ಲದ ಮಾಹಿತಿ ಮತ್ತು ದೃಶ್ಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದನ್ನು (ಶೇರ್ ಮಾಡುವುದನ್ನು) ತಪ್ಪಿಸಬೇಕು ಎಂದು ಸಚಿವಾಲಯವು ಸಾರ್ವಜನಿಕರಲ್ಲಿ ವಿನಂತಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು