ಉಡುಪಿ : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ದೇಶಾದ್ಯಂತ ಆಯೋಜಿಸುತ್ತಿರುವ ಸಾಹಿತ್ಯೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ–2026 ಆಗಸ್ಟ್ 1 ಮತ್ತು 2ರಂದು ಕಾರ್ಕಳ ಬಂಗ್ಲ ಗುಡ್ಡೆ ಇಲ್ಲಿನ ತ್ವಯಿಭಾ ಗಾರ್ಡನ್ ನಲ್ಲಿ ಜರುಗಲಿದೆ.
ಈ ಪ್ರತಿಭಾ ಸಂಗಮದಲ್ಲಿ ಜಿಲ್ಲೆಯ ಐದು ಡಿವಿಷನ್ಗಳಿಂದ 450ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಸಾಹಿತ್ಯ, ಭಾಷಣ, ವಾಕ್ ಚಾತುರ್ಯ, ಬರವಣಿಗೆ, ಕಲೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲಿದ್ದಾರೆ.
ವಿದ್ಯಾರ್ಥಿಗಳ ಸೃಜನಶೀಲತೆ, ಬೌದ್ಧಿಕ ಸಾಮರ್ಥ್ಯ, ನಾಯಕತ್ವ ಗುಣಗಳು ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ.
ಆಗಸ್ಟ್ 2ರಂದು ಸಂಜೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಸಾಹಿತ್ಯೋತ್ಸವ ಸಮಿತಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ