ಮಂಗಳೂರು: ಇತ್ತೀಚೆಗೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ಜೀವ ಕಳೆದುಕೊಂಡ ಕಿನ್ಯ ಗ್ರಾಮದ ಉಕ್ಕುಡ ರಿಫಾಯಿಯ್ಯ ಮದ್ರಸದ 4ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಇಮಾಜ್ ಫರೀದ್ ಅವರ ಕುಟುಂಬಸ್ಥರಿಗೆ ಸೂಕ್ತ ನ್ಯಾಯ ಒದಗಿಸಬೇಕು ಹಾಗೂ ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಕಿನ್ಯ ರೇಂಜ್ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ. ದರ್ಶನ್ ಅವರಿಗೆ ಮನವಿ ಸಲ್ಲಿಸಿತು.
ಕಿನ್ಯ ರೇಂಜ್ ಅಧ್ಯಕ್ಷರಾದ ಇಬ್ರಾಹಿಂ ಕೊಣಾಜೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ನಿಯೋಗವು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ವಿನಂತಿಸಿತು.
ಈ ಸಂದರ್ಭದಲ್ಲಿ ನಿಯೋಗದಲ್ಲಿ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಫಾರೂಕ್ ಕಿನ್ಯ, ಪದಾಧಿಕಾರಿಗಳಾದ ಎಸ್‌ಬಿ ಹನೀಫ್ ಉಚ್ಚಿಲ, ಅಶ್ರಫ್ ಮರಾಟಿಮೂಲೆ, ಬಷೀರ್ ಅಜ್ಜಿನಡ್ಕ, ಉಕ್ಕುಡ ರಿಫಾಯಿಯ್ಯ ಜುಮಾ ಮಸೀದಿ ಹಾಗೂ ಮದ್ರಸ ಅಧ್ಯಕ್ಷರಾದ ಅಬ್ಬಾಸ್ ಕೆ.ಬಿ. ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ