ಬೆಂಗಳೂರು: ಕರಾವಳಿ ಐಕ್ಯತಾ ವೇದಿಕೆ, ಬೆಂಗಳೂರು ಇವರ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ನಗರದ ಡಾ. ಅಂಬೇಡ್ಕರ್ ನಗರ, ಯಶವಂತಪುರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರಾವಳಿ ಐಕ್ಯತಾ ವೇದಿಕೆಯ ಅಧ್ಯಕ್ಷರಾದ ನೌಶಾದ್ ಶಾ- ಇ- ದರ್ಬಾರ್ ಅವರು ವಹಿಸಿದ್ದರು. ಶಾಹೀಕ್ ಮಲಾರ್ ಸ್ವಾಗತ ಭಾಷಣ ಮಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತರಾದ ರಫೀ. ಎಂ.ಯು ಅವರು ಭಾಗವಹಿಸಿದ್ದರು. ಅವರು ಸ್ವಾತಂತ್ರ್ಯೋತ್ಸವದ ಮಹತ್ವ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಕುರಿತು ಮಾತನಾಡಿ, ಯುವಜನರಲ್ಲಿ ದೇಶಪ್ರೇಮ ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸುವ ಅಗತ್ಯವನ್ನು ತಿಳಿಸಿದರು.


ಕಾರ್ಯಕ್ರಮದಲ್ಲಿ ಕರಾವಳಿ ಐಕ್ಯತಾ ವೇದಿಕೆಯ ಕಾನೂನು ಸಲಹೆಗಾರರಾದ ಅಶ್ರಫ್ ಪಿ.ಎಂ. ಅವರು ಮಾತನಾಡಿ ಯುವಜನರನ್ನು ಕಾಡುತ್ತಿರುವ ಡ್ರಗ್ಸ್ ಸೇರಿದಂತೆ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನ ನಡೆಸುವಂತೆ ಯುವಜನರಿಗೆ ಕರೆ ನೀಡಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರಾವಳಿ ಐಕ್ಯತಾ ವೇದಿಕೆಯ ವತಿಯಿಂದ ದಿನದಯಾಳು ನರ್ಸರಿ ಹಾಗೂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಅನುಕೂಲಕ್ಕಾಗಿ ಕುಡಿಯುವ ನೀರಿನ ಡ್ರಮ್ನ್ನು ಕೊಡುಗೆಯಾಗಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.


ಕರಾವಳಿ ಐಕ್ಯತಾ ವೇದಿಕೆಯ ಈ ಸಮಾಜಮುಖಿ ಕಾರ್ಯಕ್ಕೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರಾವಳಿ ಐಕ್ಯತಾ ವೇದಿಕೆಯ ವತಿಯಿಂದ ಕೈಗೊಂಡ ಈ ಕಾರ್ಯಕ್ರಮವನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಐಕ್ಯತಾ ವೇದಿಕೆಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ರಾಷ್ಟ್ರದ ಏಕತೆ, ಸೌಹಾರ್ದತೆ, ಯುವಜನರ ಸುರಕ್ಷತೆ ಹಾಗೂ ಸಮಾಜಮುಖಿ ಸೇವೆಯ ಸಂಕಲ್ಪದೊಂದಿಗೆ ಕರಾವಳಿ ಐಕ್ಯತಾ ವೇದಿಕೆಯ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.
ಅಲಿ ಮೀಡಿಯಾ ವಿಂಗ್ ಕರಾವಳಿ ಐಕ್ಯತಾ ವೇದಿಕೆ ಬೆಂಗಳೂರು**















ಇನ್ನಷ್ಟು ಸುದ್ದಿಗಳು
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ