ಹೂವಿನ ಹಡಗಲಿ : ಕರ್ನಾಟಕ ರಾಜ್ಯ ಸುನ್ನೀ ಸ್ಫೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಇದರ 14ನೇ ರಾಜ್ಯ ಮಟ್ಟದ ಸಾಹಿತ್ಯೋತ್ಸವ ಸೆಪ್ಟೆಂಬರ್ 4.5.6 ತಾರೀಖುಗಳಲ್ಲಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಮಸ್‌ರ್ ಕ್ಯಾಂಪಸ್ ನಲ್ಲಿ ನಡೆಯಲಿದೆ.
ಸೆಪ್ಟೆಂಬರ್ 4 ರಂದು ಸಂಜೆ 5 ಗಂಟೆಗೆ ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವದ ಧ್ವಜಾರೋಹಣ ಸಾಹಿತ್ಯೋತ್ಸವ ಸಮಿತಿ ಅಧ್ಯಕ್ಷರಾದ ವಾರದ ಗೌಸ್ ಮೊಯಿದೀನ್‌ರವರು ನೆರವೇರಿಸಲಿದ್ದು ರಾತ್ರಿ ಗ್ರಾಂಡ್ ಮೌಲೀದ್ ಮಜ್ಜಿಸ್ ನಡೆಯಲಿದೆ.
ಸೆಪ್ಟೆಂಬರ್ 5, 6 ತಾರೀಖುಗಳಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಾಹಿತ್ಯೋತ್ಸವಕ್ಕೆ 27 ಜಿಲ್ಲೆಗಳ 2000 ಆಯ್ದ ಪ್ರತಿಭೆಗಳು ಆಗಮಿಸಲಿದ್ದು 9 ವೇದಿಕೆಗಳಲ್ಲಿ 150 ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿದೆ.
ಸಾಹಿತ್ಯೋತ್ಸವ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 5 ಬೆಳಿಗ್ಗೆ 10ಗಂಟೆಗೆ ನಡೆಯಲಿದ್ದು ಸಾಹಿತ್ಯೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ವಾರದಾ ಗೌಸ್ ಮೊಯಿದೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಸಾಹಿತಿಗಳಾದ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ನಾಡೋಜ ಕುಂ ವೀರಭದ್ರಪ್ಪ ರವರು 14ನೇ ರಾಜ್ಯ ಮಟ್ಟದ ಸಾಹಿತ್ಯೋತ್ಸವ ಉದ್ಘಾಟನೆ ಮಾಡಲಿದ್ದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ, ಕೋಶಾಧಿಕಾರಿ ಅನ್ವರ್ ಅಸ್‌ಅದಿ, ಸಾಹಿತ್ಯೋತ್ಸವ ಸಮಿತಿ ಚೇರಾನ್ ಅಶ್ರಫ್ ಸಖಾಫಿ ದಾವಣಗೆರೆ, ಜುನೈದ್ ಸಖಾಫಿ, ಸಿನಾನ್ ಸಖಾಫಿ, ಮಹಬೂಬ್ ಸಿದ್ದಾಪುರ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.
ರಾಜ್ಯ ಮಟ್ಟದ ಸಾಹಿತ್ಯೋತ್ಸವ ಸೆಪ್ಟೆಂಬರ್ 06 ರವಿವಾರ ಸಂಜೆ ಸಮಾರೋಪಗೊಳ್ಳಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ