ಮಂಗಳೂರು: ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ (ರಿ.) ವತಿಯಿಂದ ಪ್ರವಾದಿ ಮುಹಮ್ಮದ್ ಮುಸ್ತಫಾ ﷺ ಅವರ 1501ನೇ ಜನ್ಮದಿನಾಚರಣೆಯ ಅಂಗವಾಗಿ ಮಂಗಳೂರಿನ ಸರ್ಕಾರಿ ಲೇಡಿ ಗೋಶನ್ ಆಸ್ಪತ್ರೆಯ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣಾ ಕಾರ್ಯಕ್ರಮವು ಸೆಪ್ಟೆಂಬರ್ 3ರಂದು ಬೆಳಗ್ಗೆ 11.15ಕ್ಕೆ ಯಶಸ್ವಿಯಾಗಿ ನಡೆಯಿತು.
ಪ್ರವಾದಿ ಮುಹಮ್ಮದ್ ﷺ ಅವರ ಮಾನವೀಯತೆ, ಕರುಣೆ ಮತ್ತು ಸಮಾಜ ಸೇವೆಯ ಸಂದೇಶವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾಜಮುಖಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಈ ಕುಡಿಯುವ ನೀರಿನ ಸೌಲಭ್ಯವನ್ನು ಅರ್ಪಿಸಲಾಯಿತು.
ಉಪಸ್ಥಿತರಿದ್ದ ಗಣ್ಯರು:
- ಡಾ. ದುರ್ಗಾಪ್ರಸಾದ್ ಎಂ.ಆರ್ – ವೈದ್ಯಕೀಯ ಅಧೀಕ್ಷಕರು, ಸರ್ಕಾರಿ ಲೇಡಿ ಗೋಶನ್ ಆಸ್ಪತ್ರೆ, ಮಂಗಳೂರು
- ಡಾ. ಜಗದೀಶ್ – ವಸತಿ ವೈದ್ಯಾಧಿಕಾರಿ (RMO), ಲೇಡಿ ಗೋಶನ್ ಆಸ್ಪತ್ರೆ
- ಶಮೀಮ್ ಕುಟ್ಟಿಕಳ – ಅಧ್ಯಕ್ಷರು, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
- ಹನೀಫ್ ಸಾಲೆತ್ತೂರು – ಉಪಾಧ್ಯಕ್ಷರು, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
- ಹಬೀಬ್ ಉಳಾಯಿಬೆಟ್ಟು – ಕಾರ್ಯದರ್ಶಿ, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
- ಶಕೀಲ್ ಹೈದರ್ – ಕೋಶಾಧಿಕಾರಿ, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
(ಟ್ರಸ್ಟ್ನ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು).
ಸಂಸ್ಥೆಯ ಕಿರು ಪರಿಚಯ:
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಕಳೆದ 8 ವರ್ಷಗಳಿಂದ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದೆ. ವಿಶೇಷವಾಗಿ ಕ್ಯಾನ್ಸರ್ ಮತ್ತು ಡಯಾಲಿಸಿಸ್ ರೋಗಿಗಳಿಗೆ ಆರ್ಥಿಕ ಹಾಗೂ ವೈದ್ಯಕೀಯ ನೆರವು ನೀಡುವ ಜೊತೆಗೆ, ವಿವಿಧ ಆರೈಕೆ ಕೇಂದ್ರಗಳಿಗೆ ಅಗತ್ಯ ಸಹಾಯ ಒದಗಿಸುವ ಮೂಲಕ ಮಾದರಿ ಮಾನವೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ.















ಇನ್ನಷ್ಟು ಸುದ್ದಿಗಳು
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು