janadhvani

Kannada Online News Paper

ರಿಯಾದ್ ವಿಮಾನ ನಿಲ್ದಾಣ ದಾಳಿ: ಗಾಯಗೊಂಡವರಲ್ಲಿ 11 ಮಂದಿ ಭಾರತೀಯರು- ಭಾರತೀಯ ರಾಯಭಾರ ಕಚೇರಿ

ಗಾಯಗೊಂಡವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಲು ಸೌದಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿಯೂ ರಾಯಭಾರ ಕಚೇರಿ ತಿಳಿಸಿದೆ

ರಿಯಾದ್: ರಿಯಾದ್ ವಿಮಾನ ನಿಲ್ದಾಣದ ಮೇಲೆ ನಡೆದ ಹೂತಿ ದಾಳಿಯಲ್ಲಿ ಗಾಯಗೊಂಡವರಲ್ಲಿ 11 ಭಾರತೀಯರು ಸೇರಿದ್ದಾರೆ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಗಾಯಗೊಂಡವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಲು ರಾಯಭಾರ ಕಚೇರಿಯು ಸೌದಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಆಸ್ಪತ್ರೆಯ ಅಧಿಕಾರಿಗಳನ್ನೂ ಸಂಪರ್ಕಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾದ ಕೂಡಲೇ ತಿಳಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ರಿಯಾದ್ ವಿಮಾನ ನಿಲ್ದಾಣದಲ್ಲಿ ನಿನ್ನೆ ನಡೆದ ಈ ದಾಳಿಯಲ್ಲಿ ದುರದೃಷ್ಟವಶಾತ್ 12 ಜನರು ಮೃತಪಟ್ಟಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿರಿ...