ವಿಜಯಪುರ:ಜೆಡಿಎಸ್ ಮುಖಂಡ ಪಿ.ಜಿ.ಆರ್.ಸಿಂಧ್ಯಾ, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲಗೆ ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಜಾತಶತ್ರುವಿದ್ದಂತೆ. ಅವನು ತುಂಬಾ ಒಳ್ಳೆಯ ಮನುಷ್ಯ. ಆತನ ನೇತೃತ್ವದ ರಾಜ್ಯ ಸರ್ಕಾರ ಕೆಡವಲು ಕೈ ಹಾಕಬೇಡಿ’ ಎಂದು ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ಚಿಂತನ–ಸಾಂಸ್ಕೃತಿಕ ಬಳಗ ಶುಕ್ರವಾರ ಆಯೋಜಿಸಿದ್ದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಈ ಹಿಂದಿನ ಸರ್ಕಾರದಲ್ಲಿ ನೀವು ಅತ್ಯಂತ ಪ್ರಭಾವಶಾಲಿಯಾಗಿದ್ದವರು. ಎಡವಿದ್ದು ಎಲ್ಲಿ ಎಂಬುದರ ಆತ್ಮಾವಲೋಕನವನ್ನಷ್ಟೇ ಮಾಡಿಕೊಳ್ಳಿ. ನಿಮಗೆ ನಾಯಕತ್ವದ ಶಕ್ತಿಯಿದೆ. ಆದರೆ ಸರ್ಕಾರ ಉರುಳಿಸುವ ಕೆಲಸಕ್ಕೆ ಕೈ ಹಾಕಬೇಡ್ರೀ’ ಎಂದು ವೇದಿಕೆಯಲ್ಲಿ ಉಪಸ್ಥಿತರಿದ್ದ ಎಂ.ಬಿ.ಪಾಟೀಲಗೆ ಸಲಹೆ ನೀಡಿದರು.
‘ಲಿಂಗಾಯತ ಹೋರಾಟದಿಂದ ನೀವು ನಾಯಕರಾಗಿ ಬೆಳೆದಿದ್ದೀರಿ. ಕತ್ತಲೆ ಕೋಣೆಯೊಳಗಿದ್ದ ಬಸವೇಶ್ವರರನ್ನು ಬೆಳಕಿಗೆ ಕರೆತರಲು ಗಟ್ಟಿ ಧ್ವನಿಯಲ್ಲಿ ಹೋರಾಡಿದ್ದೀರಿ. ಧೈರ್ಯವಾಗಿ ಮಾತನಾಡಿ, ಸತ್ಯ ಹೇಳಿದ್ದೀರಿ’ ಎಂದು ಪ್ರಶಂಸಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ