ಬೈಂದೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಅಧೀನದಲ್ಲಿ ರಾಜ್ಯಾದಂತ ಸೆಕ್ಟರ್ ಮಟ್ಟದಲ್ಲಿ ನಡೆಯುತ್ತಿರುವ “ನಮ್ಮ ಮಕ್ಕಳು ನಮ್ಮವರಾಗಲು” ಎಂಬ ಘೋಷಣೆಯೊಂದಿಗೆ ಎಸ್ಸೆಸ್ಸೆಫ್ ನಾವುಂದ ಸೆಕ್ಟರ್ ವತಿಯಿಂದ ಜನಜಾಗ್ರತಿ ಅಭಿಯಾನವು ನಾವುಂದ ಜುಮಾ ಮಸೀದಿ ವಠಾರದಲ್ಲಿ ಇತ್ತೀಚೆಗೆ ಬಹಳ ವಿಜೃಂಭಣೆಯಿಂದ ನಡೆಸಲಾಯಿತು.
ನಾವುಂದ ಕೇಂದ್ರ ಮಸೀದಿಯಿಂದ ನಾವುಂದ ಪಟ್ಟಣ ವರೆಗೆ ನಡೆಸಿದ ಕಾಲ್ನಡಿಗೆ ಜಾಥಾದ ಬಳಿಕ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹನೀಫ್ ಸಅದಿ ನಾವುಂದರವರ ಸಭಾಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ದ.ಕ.ಜಿಲ್ಲಾ ನಾಯಕರಾದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉದ್ಘಾಟಿಸಿ, ಶುಭಹಾರೈಸಿದರು. ಸ್ಥಳೀಯ ಮುದರ್ರಿಸರಾದ ಹಾಜಿ ಇಕ್ರಾಮುಲ್ಲಾ ಕಾಮಿಲ್ ಸಖಾಫಿ ಸಂದೇಶ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು, ಎಸ್ಸೆಸ್ಸೆಫ್ ಕಾರ್ಯಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಮರುಲ್ ಫಾರೂಖ್ ಸಖಾಫಿ ಬಡಾಕೆರೆ ಸ್ವಾಗತಿಸಿ, ಸೆಕ್ಟರ್ ಕಾರ್ಯದರ್ಶಿ ಬದ್ರುದ್ದೀನ್ ಝುಹುರಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ