ಹೌದು , ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆ ಯಾವ ಕಡೆಗೆ ಸಾಗುತ್ತಿದೆ ಎಂಬುದು ಈಗ ಎಲ್ಲರ ಮನಸ್ಸಿನಲ್ಲಿ ಮೂಡಿರುವಂತಹ ವಿಚಾರ. ಇದಕ್ಕೆ ಬಲವಾದ ಕಾರಣವೇನೆಂದರೆ, ದೇಶದ ಸರ್ವೋಚ್ಚ ನ್ಯಾಯಾಲಯ ಎನಿಸಿಕೊಂಡಿರುವ ಸುಪ್ರೀಂ ಕೋರ್ಟ್ ನೀಡುತ್ತಿರುವ ಕೆಲವೊಂದು ಅವೈಜ್ಙಾನಿಕ ತೀರ್ಪುಗಳು. ಎರಡು ಮೂರು ದಿನಗಳ ಹಿಂದೆ ಸುಪ್ರೀಂ ಕೊರ್ಟ್ ತೀರ್ಪೊಂದನ್ನು ಹೊರಡಿಸಿತ್ತು. ಅದೇನೆಂದರೆ, ಸ್ತ್ರೀ ಪುರುಷರ ನಡುವೆ ಇರುವ ಅನೈತಿಕ ಸಂಬಂಧ ಅಪರಾಧವಲ್ಲ.
ಇದು ಒಂದು ರೀತಿಯಲ್ಲಿ ಅತ್ಯಾಚಾರಿಗಳಿಗೆ ಹಾಗೂ ಅನೈತಿಕ ಸಂಬಂಧ ಹೊಂದಿರುವವರಿಗೆ ಪರವಾನಿಗೆ ನೀಡಿದ ಹಾಗೆ. ಅತ್ಯಾಚಾರ ಹಾಗೂ ಅನೈತಿಕ ಸಂಬಂಧ ಇಂದು ನಮ್ಮ ದೇಶಕ್ಕೆ ಅಂಟಿಕೊಂಡಿರುವ ಬಹುದೊಡ್ಡ ಸಮಸ್ಯೆಯಾಗಿದೆ. ಇಂತಹ ಸನ್ನಿವೇಶದಲ್ಲಿ ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯ ಇಂತಹ ಒಂದು ಅವೈಜ್ಙಾನಿಕ ತೀರ್ಪು ನೀಡಿದನ್ನು ನೋಡಿದರೆ, ಖಂಡಿತವಾಗಿಯೂ ನಮ್ಮ ದೇಶದ ಕಾನೂನು ವ್ಯವಸ್ಥೆಯ ಬಗ್ಗೆ ಜನಸಾಮಾನ್ಯರಲ್ಲಿ ಆತಂಕ ಉಂಟುಮಾಡಿದೆ.
ಇಂದು ನಮ್ಮ ದೇಶಕ್ಕೆ ಅಂಟಿಕೊಂಡಿರುವ ಹಲವಾರು ಸಮಸ್ಯೆಗಳು ಜನಸಾಮಾನ್ಯರನ್ನು ಹಲವು ರೀತಿಯಲ್ಲಿ ಕಾಡುತ್ತಿದೆ. ಇದರ ಬಗ್ಗೆ ಒಂದು ಸಮಗ್ರ ಅಧ್ಯಯನ ನಡೆಸಿ , ಅದರ ಪರಿಹಾರಕ್ಕೆ ಸೂಕ್ತವಾದ ಒಂದು ಕಾನೂನು ತರುವ ಬದಲು ,ಅನೈತಿಕ ಸಂಬಂಧ ಅಪರಾಧವಲ್ಲ ಎಂಬ ತೀರ್ಪು ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯ ಮಾಡಿದೆ..
ದೇಶದ ಸರ್ವೋಚ್ಚ ನ್ಯಾಯಾಲಯದೊಂದಿಗೆ ನಮ್ಮೆಲ್ಲರ ವಿನಂತಿಯೇನೆಂದರೆ, ಈಗಾಗಲೇ ನೀಡಿರುವಂತಹ ತೀರ್ಪನ್ನು ಪುನಃ ಪರಿಶೋಧಿಸಿ,ಅನೈತಿಕ ಸಂಬಂಧ ಹಾಗೂ ಅತ್ಯಾಚಾರ ತಡೆಗಟ್ಟುವ ರೀತಿಯ ಕಾನೂನೊಂದನ್ನು ತರಬೇಕು. ಹಾಗಾಗಿದ್ದಲ್ಲಿ ಮಾತ್ರ ಈ ಭವ್ಯ ಭಾರತದಲ್ಲಿ ಅರಾಜಕತೆಯನ್ನು ಹೋಗಲಾಡಿಸಬಹುದು. ಇಲ್ಲವಾದಲ್ಲಿ ಸುಂದರವಾದ ಈ ಭಾರತ ಕೂಡ ಮುಂದೊಂದು ದಿನ ಅನೈತಿಕತೆಯ ಕೇಂದ್ರವಾಗಿ ಮಾರ್ಪಾಡಾಗುವ ಎಲ್ಲಾ ಸಾಧ್ಯತೆ ಇದೆ.
ಸಾರ್ವಜನಿಕರು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಳ್ಳುವುದು ಬಹಳ ಅಗತ್ಯ ಎಂದು ಹೇಳುತ್ತಾ ನನ್ನ ಪುಟ್ಟ ಅನಿಸಿಕೆಗೆ ವಿರಾಮ.
✍ ಹಸೈನಾರ್ ಕಾಟಿಪಳ್ಳ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ