ಶಿಮೊಗ್ಗ:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಚಿಕ್ಕಮಗಳೂರು,ಕೊಡಗು,ಬೆಂಗಳೂರು,ಮೈಸೂರು,ಶಿಮೊಗ್ಗ ಹಾಗೂ ಹಾಸನ ಜಿಲ್ಲೆಗಳ ಸಕ್ರೀಯ ಕಾರ್ಯಕರ್ತರಿಗಾಗಿ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ರವರ ಅಧ್ಯಕ್ಷತೆಯಲ್ಲಿ ಮರ್ಕಝ್ ತ್ವೈಬಾ ಟಿಪ್ಪು ನಗರ, ಶಿಮೊಗ್ಗದಲ್ಲಿ ಅಕ್ಟೋಬರ್ 3 ಬುಧವಾರ ಮಧ್ಯಾಹ್ನ 2:00 ಗಂಟೆಗೆ ನಡೆಯಲಿರವುದು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಸ್ಲಿಯಾರ್ ನಗರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು ತರಗತಿಯನ್ನು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ನಾಯಕರಾದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ,ಶಂಸುದ್ದೀನ್ ಶಿಮೊಗ್ಗ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.