ಮುಂಬೈ: ನಿಯಂತ್ರಣ ವ್ಯವಸ್ಥೆಯಲ್ಲಿ ಆಗುತ್ತಿರುವ ಬದಲಾವಣೆ ಮತ್ತು ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಎಟಿಎಂಗಳನ್ನು ನಡೆಸುವುದು ಕಷ್ಟವಾಗುತ್ತಿದೆ ಇದರಿಂದಾಗಿ 2019ರ ಮಾರ್ಚ್ ಒಳಗಾಗಿ ದೇಶದಲ್ಲಿರುವ ಅರ್ಧದಷ್ಟು ಎಟಿಎಂಗಳು ಮುಚ್ಚಲಿವೆ. ಪರಿಣಾಮವಾಗಿ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಎಟಿಎಂ ಉದ್ಯಮದ ಒಕ್ಕೂಟ (ಸಿಎಟಿಎಂಐ) ಎಚ್ಚರಿಕೆ ನೀಡಿದೆ.
ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚಿನ ಸಂಖ್ಯೆಯ ಎಟಿಎಂಗಳು ಮುಚ್ಚಲಿವೆ. ಇದರಿಂದ ಸರ್ಕಾರದ ಆರ್ಥಿಕ ಸೇರ್ಪಡೆ ಪ್ರಯತ್ನದ ಮೇಲೆಯೂ ನಕಾರಾತ್ಮಕ ಪರಿಣಾಮ ಬೀರಲಿದೆ. ಫಲಾನುಭವಿಗಳಿಗೆ ಸರ್ಕಾರದ ಸಬ್ಸಿಡಿ ಹಣ ಪಡೆಯುವುದು ಕಷ್ಟವಾಗಲಿದೆ ಎಂದೂ ಹೇಳಿದೆ.
ಎಟಿಎಂ ಉದ್ಯಮವು ಈಗಲೂ ನೋಟು ರದ್ದತಿಯ ಆಘಾತದಿಂದ ಹೊರಬಂದಿಲ್ಲ. ಇವುಗಳಿಂದ ಬ್ಯಾಂಕ್ಗಳಿಗೆ ವರಮಾನ ಬರುತ್ತಿಲ್ಲ. ಅವುಗಳ ನಿರ್ವಹಣಾ ವೆಚ್ಚ ಹೆಚ್ಚುತ್ತಲೇ ಇದೆ. ವಿನಿಮಯ ಶುಲ್ಕವೂ ಬಹಳಷ್ಟು ಕಡಿಮೆ ಇದೆ ಎಂದು ‘ಸಿಎಟಿಐ’ ತಿಳಿಸಿದೆ. ಸೇವೆ ಒದಗಿಸುತ್ತಿರುವವರ ಬಳಿ ವೆಚ್ಚ ನಿರ್ವಹಿಸುವ ಹಣ ಇಲ್ಲದಾಗಿದೆ. ಹೀಗಾಗಿ ಅನಿವಾರ್ಯವಾಗಿ ಮುಚ್ಚುವ ನಿರ್ಧಾರಕ್ಕೆ ಬರುತ್ತಿದ್ದಾರೆ.
ಸಾಫ್ಟ್ವೇರ್ ಮತ್ತು ಹಾರ್ಡ್ವೇರ್ ಮೇಲ್ದರ್ಜೆಗೆ ಏರಿಸಬೇಕಾಗಿರುವುದು ಹೆಚ್ಚುವರಿ ಹೊರೆಯಾಗಿದೆ. ಹೊಸ ನೋಟುಗಳನ್ನು ಇಡಲು ಆಗುವಂತೆ ಟ್ರೇಗಳನ್ನು ಮರುಹೊಂದಾಣಿಕೆ ಮಾಡಬೇಕಾಗಿದೆ. ಇದಕ್ಕೆ ₹ 3 ಸಾವಿರ ಕೋಟಿ ವೆಚ್ಚವಾಗುತ್ತಿದೆ.
ಬ್ಯಾಂಕ್ ಆವರಣದಲ್ಲಿ ಇರದ 1 ಲಕ್ಷ ಎಟಿಎಂಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ನಿರ್ವಹಿಸುವ 13 ಸಾವಿರ ಎಟಿಎಂಗಳಿಗೆ ಬೀಗ ಬೀಳಲಿದೆ.
ನಿರ್ವಹಣೆ ದುಬಾರಿ:ಒಂದು ಎಟಿಎಂ ನಿರ್ವಹಣೆ ಮಾಡಲು ತಿಂಗಳಿಗೆ ಅಂದಾಜು ₹ 60 ಸಾವಿರ ವೆಚ್ಚವಾಗುತ್ತಿದೆ. ಇದನ್ನು ಸರಿದೂಗಿಸಲು ಆ ಎಟಿಎಂನಲ್ಲಿ ಗ್ರಾಹಕರು ಒಂದು ದಿನಕ್ಕೆ ಕನಿಷ್ಠ 100 ಬಾರಿ ಹಣ ಪಡೆಯಬೇಕು. ಆದರೆ ಹಾಗಾಗುತ್ತಿಲ್ಲ. ಕನಿಷ್ಠ 400 ರಿಂದ 500 ಎಟಿಎಂ ಮುಚ್ಚಿದರೆ ಅದರಿಂದ ಬ್ಯಾಂಕ್ಗೆ ಪ್ರತಿ ತಿಂಗಳು ಅಂದಾಜು ₹ 3 ಕೋಟಿ ಉಳಿತಾಯವಾಗಲಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ