ದುಬೈ :ಸಾರ್ವಜನಿಕ ಕ್ಷಮಾದಾನವನ್ನು ಜಾರಿಗೊಳಿಸಲಾದ ಯುಎಇಯಲ್ಲಿ ಅಕ್ರಮವಾಗಿ ನೆಲೆಸಿದವರಿಗೆ ತಮ್ಮ ಸ್ವದೇಶಕ್ಕೆ ಮರಳಲು ಕ್ಷಮಾದಾನ ಅವಧಿಯನ್ನು ಈ ತಿಂಗಳ ಕೊನೆಯ ವರಗೆ ವಿಸ್ತರಿಸಲಾಗಿದೆ.
ದೇಶದ ರಾಷ್ಟ್ರೀಯ ದಿನಾಚರಣೆಯ ಹಿನ್ನಲೆಯಲ್ಲಿ ಸಾರ್ವಜನಿಕ ಕ್ಷಮಾದಾನವನ್ನು ವಿಸ್ತರಿಸಲಾಗಿದೆ ಎಂದು ‘ಖಲೀಜ್ ಟೈಮ್ಸ್’ ವರದಿ ಮಾಡಿದೆ.
ರಜೆ ನಿಮಿತ್ತ ಸ್ಥಗಿತಗೊಂಡಿದ್ದ ಕ್ಷಮಾದಾನ ಅರ್ಜಿಗಳ ವಿಲೇವಾರಿಯನ್ನು ಡಿ.4 ರಂದು ಆರಂಭಿಸಲಾಗಿದ್ದು, ಅಕ್ರಮವಾಗಿ ಯುಎಇಯಲ್ಲಿ ನೆಲೆಸಿರುವ ವಿದೇಶಿಯರು ಕ್ಷಮಾದಾನದ ಪ್ರಯೋಜನವನ್ನು ಡಿಸೆಂಬರ್ 31ರವರೆಗೆ ಪಡೆದುಕೊಳ್ಳಬಹುದಾಗಿದೆ.
ಆಗಸ್ಟ್ ತಿಂಗಳಲ್ಲಿ ಜಾರಿಗೆ ತರಲಾಗಿದ್ದ ಮೂಲ ಯೋಜನೆಯು ಅಕ್ಟೋಬರ್ 31ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು 30 ದಿನಗಳ ಕಾಲ ವಿಸ್ತರಿಸಲಾಗಿತ್ತು ,ನವೆಂಬರ್ 30ರಂದು ಕೊನೆಗೊಳ್ಳಬೇಕಾಗಿದ್ದ ಸಾರ್ವಜನಿಕ ಕ್ಷಮಾದಾನವನ್ನು ಇನ್ನೂ ಒಂದು ತಿಂಗಳು ವಿಸ್ತರಿಸಲಾಗಿದೆ.
ಅಕ್ರಮವಾಗಿ ನೆಲೆಸಿರುವ ವಿದೇಶಿಯರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲು ಹಾಗೂ ಅವರಿಗೆ ದೇಶದಲ್ಲಿ ಕೆಲಸ ಮಾಡುವ ಅವಕಾಶ ನೀಡಲು ಯುಎಇ ಉತ್ಸುಕವಾಗಿದೆ ಎಂದು ಶಾರ್ಜಾ ವಲಸೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ‘ಖಲೀಜ್ ಟೈಮ್ಸ್’ಗೆ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ