ಮುಂಬೈ: ಅಂಧೇರಿ ಹೊರವಲಯದ ಮರೋಲ್ನಲ್ಲಿನ ಸರ್ಕಾರಿ ಆಸ್ಪತ್ರೆ(ಇಎಸ್ಐಸಿ)ಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿದೆ.
ಗಾಯಗೊಂಡಿರುವ ಆಸ್ಪತ್ರೆಯ ಸಿಬ್ಬಂದಿ, ರೋಗಿಗಳು ಸೇರಿ 147 ಜನರನ್ನು ರಕ್ಷಿಸಲಾಗಿದೆ. ಮೃತಪಟ್ಟ 8 ಜನರಲ್ಲಿ 6 ತಿಂಗಳ ಹಸುಳೆಯೂ ಸೇರಿದೆ.

ಐದು ಅಂತಸ್ತಿನ ಇಎಸ್ಐಸಿ ಆಸ್ಪತ್ರೆಯ ಕಟ್ಟಡದ 4ನೇ ಅಂತಸ್ತಿನಲ್ಲಿ ಸಂಜೆ 4:20ಕ್ಕೆ ಬೆಂಕಿ ಕಾಣಿಸಿಕೊಂಡಿತು. ಇದರ ವ್ಯಾಪ್ತಿ 4:54ರ ಸುಮಾರಿಗೆ ಇಡೀ ಅಂತಸ್ತನ್ನು ಆವರಿಸಿಕೊಂಡಿತು ಎಂದು ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಈ ವೇಳೆ ರೋಗಿಗಳು ಸೇರಿದಂತೆ ನೂರಾರು ಮಂದಿ ಸಿಲುಕಿಕೊಂಡಿದ್ದರು. ಬಳಿಕ ಅವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

10 ಅಗ್ನಿ ಶಾಮಕ ವಾಹನಗಳು, 6 ನೀರಿನ ಟ್ಯಾಂಕ್ಗಳು, ಏಣಿಗಳನ್ನು ಒಳಗೊಂಡ 3 ವಾಹನಗಳು ಹಾಗೂ 16 ಆಂಬ್ಯುಲೆನ್ಸ್ಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು ಎಂದು ಕಾರ್ಯಾಚರಣೆಯಲ್ಲಿ ನಿರ್ವಹಣೆಯಲ್ಲಿದ್ದ ಹಿರಿಯ ಅಧಿಕಾರಿಗಳು ಹೇಳಿರುವುದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ. ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ